ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ನಕ್ಸಲ್ ನಿಗ್ರಹಕ್ಕೆ ವಿಶೇಷ ಘಟಕ ಅಗತ್ಯ: ಸಿಂಗ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ನಕ್ಸಲ್ ನಿಗ್ರಹಕ್ಕೆ ವಿಶೇಷ ಘಟಕ ಅಗತ್ಯ: ಸಿಂಗ್
ಭಯೋತ್ಪಾದನೆ ಹಾಗೂ ನಕ್ಸಲ್ ಚಟುವಟಿಕೆಯನ್ನು ಸಂಪೂರ್ಣವಾಗಿ ಹತ್ತಿಕ್ಕಲು ಪೊಲೀಸ್ ಸಿಬ್ಬಂದಿಗೆ ಹೆಚ್ಚಿನ ತರಬೇತಿ ನೀಡುವ ಪ್ರತ್ಯೇಕ ಘಟಕ ಸ್ಥಾಪಿಸಲು ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಅಜಯ್ ಕುಮಾರ್ ಸಿಂಗ್ ಮನವಿ ಮಾಡಿಕೊಂಡಿದ್ದಾರೆ.

ಭಯೋತ್ಪಾದಕರು ಹಾಗೂ ನಕ್ಸಲರ ನಿಗ್ರಹಕ್ಕೆ ತುರ್ತು ಕಾರ್ಯಾಚರಣೆ ನಡೆಸಲು ಅಲ್ಲದೆ ಸವಾಲಾಗಿರುವ ಅಪರಾಧ ಕೃತ್ಯಗಳನ್ನು ಸಮರ್ಥವಾಗಿ ಹತ್ತಿಕ್ಕಲು ಪೊಲೀಸ್ ಸಿಬ್ಬಂದಿಗೆ ಹೆಚ್ಚಿನ ತರಬೇತಿ ಅಗತ್ಯವಿದೆ ಎಂದು ಅವರು ಹೇಳಿದರು.

ನಗರದ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಭಯೋತ್ಪಾದನೆ ಚಟುವಟಿಕೆ ಹಾಗೂ ನಕ್ಸಲ್ ಹಾವಳಿ ತಡೆಯಲು ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದು, ಸಿಬ್ಬಂದಿಗೆ ಅಗತ್ಯವಿರುವ ಹೆಚ್ಚಿನ ತರಬೇತಿ ನೀಡಲು ಸರಕಾರ ಸೂಕ್ತ ನೆರವು ನೀಡಬೇಕೆಂದು ಮನವಿ ಮಾಡಿದರು.

ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ 1,27,531 ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 92,034 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದ್ದು, ಅಪರಾಧ ಕೃತ್ಯಗಳನ್ನು ಆದಷ್ಟು ಬೇಗ ಬಗೆಹರಿಸಿ ತಪ್ಪಿತಸ್ಥರನ್ನು ಬಂಧಿಸಿ ಶಿಕ್ಷೆ ವಿಧಿಸಲಾಗಿದೆ ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪುತ್ರನಿಗೆ ಟಿಕೆಟ್-ಇದ್ರಲ್ಲಿ ನನ್ನ ಪಾತ್ರ ಇಲ್ಲ: ಯಡಿಯೂರಪ್ಪ
ಸಹಕಾರಿ ಸಂಘಗಳ ಚುನಾವಣೆ ಮುಂದಕ್ಕೆ
ಬೆಂಗಳೂರು ಸರಣಿ ಸ್ಫೋಟದ ರೂವಾರಿ ಓಮನ್‌ನಲ್ಲಿ ಸೆರೆ
ನಿರ್ಮಲಾ ವೆಂಕಟೇಶ್‌ ಬಿಜೆಪಿಗೆ ಸೇರ್ಪಡೆ
ಮಾಜಿ ಪ್ರಧಾನಿ ದೇವೇಗೌಡ ಹಾಸನದಿಂದ ಸ್ಪರ್ಧೆ
ತೇಜಸ್ವಿನಿ-ಡಿಕೆಶಿ ಜಟಾಪಟಿ ಹೈಕಮಾಂಡ್ ಗಮನಿಸುತ್ತಿದೆ: ಖರ್ಗೆ