ಚುನಾವಣಾ ನೀತಿ ಸಂಹಿತೆ ಜಾರಿಯಾದ ಮೇಲೂ ರಾಜ್ಯ ಸರಕಾರ ನಿಗಮ-ಮಂಡಳಿಯ ಅಧ್ಯಕ್ಷರನ್ನು ನೇಮಕ ಮಾಡಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ದೂರಿ ರಾಜ್ಯ ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರು ಪತ್ರ ಬರೆದಿದ್ದಾರೆ.
ಮುಖ್ಯ ಚುನಾವಣಾಧಿಕಾರಿ ಎನ್.ಎಸ್.ವಿದ್ಯಾಶಂಕರ್ ಅವರಿಗೆ ಬರೆದಿರುವ ಪತ್ರ ಬರೆದಿದ್ದು, ಚುನಾವಣಾ ವೇಳಾಪಟ್ಟಿ ಪ್ರಕಟವಾದ ನಂತರವೂ ಬಿಜೆಪಿ ಪಕ್ಷ ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಗಾಳಿಗೆ ತೂರಿದೆ ಎಂದು ಆರೋಪಿಸಿದ್ದಾರೆ.
ಅಲ್ಲದೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಬಿಜೆಪಿ ಪಕ್ಷ ಪಡಿತರ ಚೀಟಿ ವಿತರಣೆ ಮಾಡಿರುವುದನ್ನು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದೇಶಪಾಂಡೆ ಅವರು ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದಾರೆ. |