ಕಾಂಗ್ರೆಸ್ ನಾಯಕರ ನಡುವಿನ ಭಿನ್ನಮತ ಹಾಗೂ ಜೆಡಿಎಸ್ ನಾಯಕರ ನಂಬಿಕೆ ದ್ರೋಹದ ಫಲದಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರುವಂತಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ.
ಕಾಂಗ್ರೆಸ್‌ನಲ್ಲಿ ಭಿನ್ನಾಭಿಪ್ರಾಯವಿರುವುದು ಕಾರ್ಯರ್ತರಲ್ಲಿ ಅಲ್ಲ, ಮುಖಂಡರಲ್ಲಿ. ಈ ಅಸಮಾಧಾನಗಳನ್ನು ನಾವು ಬಗೆಹರಿಸಿಕೊಳ್ಳಬೇಕು. ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸಬೇಕು ಎಂದು ಕರೆ ನೀಡಿದರು. ಪಕ್ಷದಲ್ಲಿ ಎಲ್ಲರೂ ಅಧಿಕಾರಕ್ಕಾಗಿ ಹಾತೊರೆಯುತ್ತಿದ್ದಾರೆ. ಆದರೆ ಪಕ್ಷಕ್ಕೆ ತಾವೇನು ಕೊಡುಗೆ ನೀಡುತ್ತಿದ್ದೇವೆ ಎಂಬುದನ್ನು ಯೋಚಿಸುತ್ತಿಲ್ಲ ಎಂದರು.
ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅಲ್ಪಸಂಖ್ಯಾತರಿಗೆ ಸಾಕಷ್ಟು ಯೋಜನೆಗಲನ್ನು ರೂಪಿಸಿವೆ. ಆದರೆ, ಇವುಗಳನ್ನು ಸಮರ್ಥವಾಗಿ ಮುಟ್ಟಿಸಲು ಎಲ್ಲ ರಾಕೀಯ ಮುಖಂಡರೂ ವಿಫಲರಾಗಿದ್ದಾರೆ ಎಂದ ದೇಶಪಾಂಡೆ, ನಮ್ಮ ತಪ್ಪಿನಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಇವತ್ತು ಮತಬ್ಯಾಂಕ್ ರಾಜಕಾರಣಕ್ಕಾಗಿ ಧರ್ಮ ಮತ್ತು ಜಾತಿ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ. ಸಮಾಜದಲ್ಲಿ ಒಡಕು ಮೂಡಿಸುತ್ತಿದೆ ಎಂದು ದೂರಿದರು. |