ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್
ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವುದಕ್ಕೆ ತಮ್ಮೊಡನೆ ಸಮಾಲೋಚಿಸಿಲ್ಲ ಮತ್ತು ಪರೀಶೀಲನಾ ಸಮಿತಿಗೆ ಸಭೆಗೆ ತಮ್ಮನ್ನು ಆಹ್ವಾನಿಸಿಲ್ಲ ಎಂದು ಮುನಿಸಿಕೊಂಡಿದ್ದ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಶುಕ್ರವಾರ ಸಂಜೆ ಹೈಕಮಾಂಡ್‌ನಿಂದ ಬುಲಾವ್ ಬಂದಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎ.ಕೆ. ಆಂಟನಿ, ಪೃಥ್ವಿರಾಜ್ ಚೌಹಾಣ್, ಗುಲಾಂ ನಬಿ ಆಜಾದ್, ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆಯವರನ್ನೊಳಗೊಂಡ ತಂಡ ಸಭೆಯಲ್ಲಿ ಪಾಲ್ಗೊಳ್ಳುತ್ತಿದೆ.

ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಕೇಂದ್ರ ಸಮಿತಿಗೆ ರವಾನಿಸುವುದಕ್ಕೂ ಮೊದಲು ಈ ತಂಡ ರಾಜ್ಯ ಚುನಾವಣಾ ಸಮಿತಿ ಕಳಿಸಿರುವ ಪಟ್ಟಿಯನ್ನು ಕೂಲಂಕಷವಾಗಿ ಪರೀಶೀಲಿಸುತ್ತದೆ. ನಿರಾಶೆಯ ಮನಸ್ಥಿತಿಯಿಂದ ಹೊರ ಬಂದು ಕಾಂಗ್ರೆಸ್ ಪರ ಪ್ರಚಾರಕ್ಕೆ ಅಣಿಯಾಗಿದ್ದ ಸಿದ್ದರಾಮಯ್ಯ ಈಗ ಮತ್ತೆ ಮುನಿಸಿಕೊಂಡಿದ್ದಾರೆ.

2008ರ ಮೇನಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಗೆ ಹೈಕಮಾಂಡ್ ಅವರನ್ನು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿತ್ತಾದರೂ, ಅವರ ಸೇವೆಯನ್ನು ಬಳಸಿಕೊಳ್ಳುವಲ್ಲಿ ಪಕ್ಷ ವಿಫಲವಾಗಿತ್ತು.

ಈ ನಡುವೆ ಲಿಂಗಾಯಿತ ನಿಯೋಗವೊಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಲಿಂಗಾಯಿತರಿಗೆ ಟಿಕೆಟ್ ನೀಡುವಂತೆ ಕೋರಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಹಣದ ಹೊಳೆ ಹರಿಸಲಿರುವ ಮಹಾಸಮರ
ಗಣಿ: ದೇವೇಗೌಡರಿಂದ ರಾಜ್ಯಪಾಲರಿಗೆ ದೂರು
ಬೆಂಗಳೂರು ಸ್ಫೋಟ: ಸಿಮಿ ಉಗ್ರನ ಬಂಧನ
ಚು.ಆಯೋಗಕ್ಕೆ ಮಾಹಿತಿ ನೀಡಿ, ಹಣ ಮಾಡಿ
ಗುಂಡು ಹಾರಾಟಕ್ಕೆ ಹೇತುವಾದ ಚುಡಾವಣೆ
ಪ್ರತಿಪಕ್ಷಗಳ ಆರೋಪಕ್ಕೆ ಉತ್ತರ ಕೊಡಬೇಕಿಲ್ಲ: ಸಿಎಂ