ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಹಕಾರ ಸಚಿವರ ರಾಜೀನಾಮೆಗೆ ಆಗ್ರಹ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಹಕಾರ ಸಚಿವರ ರಾಜೀನಾಮೆಗೆ ಆಗ್ರಹ
ಸಾಲಮನ್ನಾ ಯೋಜನೆಯಡಿ ನಡೆದ ಗೋಲ್ಮಾಲ್‌ಗೆ ಸಂಬಂಧಿಸಿದಂತೆ ಸಹಕಾರ ಸಚಿವ ಲಕ್ಷ್ಮಣ್ ಸವದಿ ರಾಜೀನಾಮೆಗೆ ಆಗ್ರಹಿಸಿರುವ ಮಾಜಿ ವಿಧಾನಸಭಾಧ್ಯಕ್ಷ ಕೃಷ್ಣ ಹಾಗೂ ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಈ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಸಲ್ಲಿಸಿದ ಲೆಕ್ಕ ಪರಿಶೋಧನಾ ವರದಿಯಲ್ಲಿ 13 ಜಿಲ್ಲೆಗಳ 81,338 ಪ್ರಕರಣ ಹಚ್ಚಿ 110.40 ಕೋಟಿ ರೂ. ದುರುಪಯೋಗವಾಗಿದೆ ಎಂದು ವಿವರಿಸಿದ್ದರು. ಆದರೆ ಸಹಕಾರ ಸಚಿವರು ಸಂವಿಧಾನಬದ್ಧ ಸಂಸ್ಥೆಯ ಸಿಎಜಿ ವರದಿಯೇ ಸರಿಯಿಲ್ಲವೆಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರು ರಾಜೀನಾಮೆ ಸಲ್ಲಿಸಬೇಕೆಂದು ಆಗ್ರಹಿಸಿದ್ದಾರೆ.

13 ಜಿಲ್ಲೆಗಳಲ್ಲಿ ಮಾತ್ರವಲ್ಲದೇ ಎಲ್ಲಾ ಜಿಲ್ಲೆಗಳಲ್ಲಿ ಜಾರಿಯಾದ ಸಾಲಮನ್ನಾ ಯೋಜನೆಗಳ ಭ್ರಷ್ಟಾಚಾರದ ಬಗ್ಗೆ ಸಿಬಿಐ ತನಿಖೆ ನಡೆಸಿ, ಅಧಿಕಾರಿ, ನೌಕರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ.

"ಮುಖ್ಯಮಂತ್ರಿಗಳು 2,500 ಕೋಟಿ ರೂ. ಸಾಲ ಮನ್ನಾ ಮಾಡಿರುವುದಾಗಿ ಹೇಳುತ್ತಿದ್ದಾರೆ. ಆದರೆ ದಲ್ಲಾಳಿಗಳು, ಮಧ್ಯವರ್ತಿಗಳು ಅಧಿಕಾರಿ ವರ್ಗ ಸೇರಿಕೊಂಡು ಸಾರ್ವಜನಿಕರ ತೆರಿಗೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅನ್ನದಾತನಿಗೆ ಕನ್ನ ಹಾಕಿದರೆ ರಾಜ್ಯ ಸುಭಿಕ್ಷವಾಗಿ ಉಳಿಯಲು ಸಾಧ್ಯವಿಲ್ಲ" ಎಂದು ಅವರು ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಗೋಕರ್ಣದಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ
ದೇಶಪಾಂಡೆಯವರಿಂದ ಸಿಎಂ ತರಾಟೆ
16ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್
ಹಣದ ಹೊಳೆ ಹರಿಸಲಿರುವ ಮಹಾಸಮರ
ಗಣಿ: ದೇವೇಗೌಡರಿಂದ ರಾಜ್ಯಪಾಲರಿಗೆ ದೂರು