ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ನೀತಿ ಸಂಹಿತೆ ಉಲ್ಲಂಘನೆ: ಮಾಹಿತಿ ಕೇಳಿದ ಆಯೋಗ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ನೀತಿ ಸಂಹಿತೆ ಉಲ್ಲಂಘನೆ: ಮಾಹಿತಿ ಕೇಳಿದ ಆಯೋಗ
ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರ ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರು ಅಧಿಕಾರ ಸ್ವೀಕರಿಸಿರುವ ಕುರಿತು ಮಾಹಿತಿ ನೀಡುವಂತೆ ಚುನಾವಣಾ ಆಯೋಗವು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.

ನೀತಿ ಸಂಹಿತೆ ಜಾರಿಯಾದ ಬಳಿಕ ಕೆಲವು ನಿಗಮ ಮತ್ತು ಮಂಡಳಿ ಅಧ್ಯಕ್ಷರು ಅಧಿಕಾರ ಸ್ವೀಕರಿಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಆಯೋಗ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದೆ.

ಒಂದು ವೇಳೆ ಈ ಕುರಿತು ಜಿಲ್ಲಾಧಿಕಾರಿಗಳಿಂದ ಮಾಹಿತಿ ಬಂದಲ್ಲಿ, ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಇದೇ ವೇಳೆ ರಾಜ್ಯದಲ್ಲಿ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಕಾಪಾಡುವ ನಿಟ್ಟಿನಲ್ಲಿ ಅಕ್ರಮವಾಗಿ ಮದ್ಯ ಸರಬರಾಜು ಆಗುವುದರ ಮೇಲೆ ನಿಗಾ ವಹಿಸಲು ಇದೇ 11ರಂದು ಚುನಾವಣಾ ಆಯೋಗವು ಸಭೆ ನಡೆಸುತ್ತಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸಹಕಾರ ಸಚಿವರ ರಾಜೀನಾಮೆಗೆ ಆಗ್ರಹ
ಗೋಕರ್ಣದಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ
ದೇಶಪಾಂಡೆಯವರಿಂದ ಸಿಎಂ ತರಾಟೆ
16ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್
ಹಣದ ಹೊಳೆ ಹರಿಸಲಿರುವ ಮಹಾಸಮರ