ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಚುನಾವಣೆ: ಮ‌ೂರು ಜಿಲ್ಲಾಧಿಕಾರಿಗಳ ಎತ್ತಂಗಡಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚುನಾವಣೆ: ಮ‌ೂರು ಜಿಲ್ಲಾಧಿಕಾರಿಗಳ ಎತ್ತಂಗಡಿ
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಬದಲಾವಣೆ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಐಎಎಸ್ ಅಧಿಕಾರಿ ಶಂಭು ದಯಾಳ್ ಮೀನಾ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಉತ್ತರಕನ್ನಡದ ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿದೆ. ಇದುವರೆಗೆ ಜಿಲ್ಲಾಧಿಕಾರಿಯಾಗಿದ್ದ ಎನ್.ಎಸ್. ಚನ್ನಪ್ಪಗೌಡ ಅವರನ್ನು ವರ್ಗಾವಣೆ ಮಾಡಲಾಗಿದೆ.

ಕೃಷಿ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಎನ್. ಮಂಜುನಾಥ ಪ್ರಸಾದ ಅವರನ್ನು ದಾವಣಗೆರೆ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಅಲ್ಲಿದ್ದ ಕೆ. ಅಮರನಾರಾಯಣ ಅವರನ್ನು ಬೇರೆಡೆ ವರ್ಗಾಯಿಸಲಾಗಿದೆ.

ಇದೇ ವೇಳೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿದ್ದ ಎಚ್.ಆರ್. ಶ್ರೀನಿವಾಸ ಅವರನ್ನು ತುಮಕೂರು ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು ತಿಳಿದು ಬಂದಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮರಳಿ ಗೂಡಿಗೆ ಬನ್ನಿ: ಪರಿವಾರದವರಿಗೆ ಗೌಡರ ಕರೆ
ಮಾ.16: ಭಿನ್ನಮತೀಯ ಬಿಜೆಪಿ ಸಮಾವೇಶ
ಬಿಜೆಪಿ ಭಿನ್ನರಿಗೆ ಬೆಂಬಲ ನೀಡಲು ಮುಂದಾದ ರಾಮ ಸೇನೆ
ಅಪ್ಪನಿರಲಿ, ಮಗನಿರಲಿ ಗೆಲುವು ನನ್ನದೇ: ರಾಘವೇಂದ್ರ
ರಾಜ್ಯಬಿಜೆಪಿ ಒಡಕಿಗೆ ಸಂಧಾನದ ಮುಲಾಮು
ದಾವಣಗೆರೆ: ಈದ್ ಮೆರವಣಿಗೆ ಮೇಲೆ ಕಲ್ಲು