ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ವಿದ್ಯುತ್ ಸಮಸ್ಯೆಯಿಂದ ನೀರಿಗೆ ಅಭಾವ: ಶೋಭಾ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವಿದ್ಯುತ್ ಸಮಸ್ಯೆಯಿಂದ ನೀರಿಗೆ ಅಭಾವ: ಶೋಭಾ
ವಿದ್ಯುತ್ ಸಮಸ್ಯೆಯಿಂದಾಗಿ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಬಿಗಡಾಯಿಸಲಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ರಾಜ್ಯದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಇಲ್ಲ. ಕಳೆದ ವರ್ಷ ಈ ವೇಳೆಗೆ 400 ಗ್ರಾಮಗಳಲ್ಲಿ ಸಮಸ್ಯೆ ತಲೆದೋರಿತ್ತು. ಆ ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲಾಗಿತ್ತು. ಈಗ ಟ್ಯಾಂಕರ್ ಮೂಲಕ ಸರಬರಾಜು ಮಾಡುವಷ್ಟು ಪರಿಸ್ಥಿತಿ ಬಿಗಡಾಯಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ, ವಿದ್ಯುತ್ ಸಮಸ್ಯೆಯಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ನೀರು ಸರಬರಾಜು ವ್ಯತ್ಯಯ ಆಗಿರುವ ಬಗ್ಗೆ ತಮ್ಮ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಸಮರ್ಪಕ ವಿದ್ಯುತ್ ಒದಗಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, 500 ಕೋಟಿ ರೂಪಾಯಿಗಳನ್ನು ವಿದ್ಯುತ್ ಖರೀದಿಗೆ ಒದಗಿಸಲಾಗಿದೆ ಎಂದು ಅವರು ತಿಳಿಸಿದರು.

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಂಗಳನ್ನು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ತೆರೆಯುವ ಪ್ರಸ್ತಾಪವಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.




ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಭಾರೀ ಸಮಾವೇಶಕ್ಕೆ ಅದ್ಧೂರಿಯ ಚಾಲನೆ
ಹಾವೇರಿ: ಮೆರವಣಿಗೆ ವಿವಾದ, ನಿಷೇದಾಜ್ಞೆ ಜಾರಿ
ಚುನಾವಣೆ: ಮ‌ೂರು ಜಿಲ್ಲಾಧಿಕಾರಿಗಳ ಎತ್ತಂಗಡಿ
ಮರಳಿ ಗೂಡಿಗೆ ಬನ್ನಿ: ಪರಿವಾರದವರಿಗೆ ಗೌಡರ ಕರೆ
ಮಾ.16: ಭಿನ್ನಮತೀಯ ಬಿಜೆಪಿ ಸಮಾವೇಶ
ಬಿಜೆಪಿ ಭಿನ್ನರಿಗೆ ಬೆಂಬಲ ನೀಡಲು ಮುಂದಾದ ರಾಮ ಸೇನೆ