ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕಾಂಗ್ರೆಸ್ ಪಟ್ಟಿಯಲ್ಲಿ ಕೃಷ್ಣ, ಧರಂ, ಖರ್ಗೆ?
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾಂಗ್ರೆಸ್ ಪಟ್ಟಿಯಲ್ಲಿ ಕೃಷ್ಣ, ಧರಂ, ಖರ್ಗೆ?
ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಅಭ್ಯರ್ಥಿಗಳ ಆಯ್ಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಕಾಂಗ್ರೆಸ್ ಸರದಿ. ತಮ್ಮ ಅಭ್ಯರ್ಥಿಗಳ ಹುಡುಕಾಟದಲ್ಲಿರುವ ಕಾಂಗ್ರೆಸ್ ಕೇಂದ್ರೀಯ ಮಟ್ಟದಲ್ಲಿ ಚುನಾವಣಾ ಸಮಿತಿಯ ಸಭೆ ನಡೆಸುತ್ತಿದ್ದು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.

ರಾಜ್ಯದಿಂದ ಎಸ್.ಎಂ. ಕೃಷ್ಣ, ಧರಂಸಿಂಗ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರ ಹೆಸರುಗಳು ಕೇಳಿ ಬರುತ್ತಿವೆ. ಬೀದರ್ ಕ್ಷೇತ್ರದಿಂದ ಧರ್ಮಸಿಂಗ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಸಿದ್ದರಾಮಯ್ಯನವರಿಗೆ ಮಣೆ ಹಾಕಲು ಯೋಜನೆ ಹಾಕಿರುವ ನಿಟ್ಟಿನಲ್ಲಿ ಪ್ರಸ್ತುತ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಲೋಕಸಭೆಗೆ ಸ್ಪರ್ಧಿಸುವಂತೆ ಆಹ್ವಾನ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ಗುಲ್ಬರ್ಗಾ ಕ್ಷೇತ್ರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ರಾಜ್ಯದ ಮುಖ್ಯಮಂತ್ರಿಯಾಗಿ ಬಳಿಕ ಮಹಾರಾಷ್ಟ್ರದ ರಾಜ್ಯಪಾಲರಾಗಿ ಆಡಳಿತ ನಿರ್ವಹಿಸಿದ ಎಸ್. ಎಂ.ಕೃಷ್ಣ ಅವರನ್ನು ಬೆಂಗಳೂರು ದಕ್ಷಿಣದಿಂದ ಕಣಕ್ಕಿಳಿಸಲು ಯೋಜನೆ ಹಾಕಿಕೊಂಡಿದೆ. ಈ ಮೂಲಕ ಬೆಂಗಳೂರು ದಕ್ಷಿಣದಿಂದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಅವರಿಗೆ ಪ್ರಬಲ ಪೈಪೋಟಿ ನೀಡಲು ಮುಂದಾಗಿದೆ.

ಉಳಿದಂತೆ ಕೋಲಾರದಿಂದ ಕೆ.ಎಚ್. ಮುನಿಯಪ್ಪ, ಧಾರವಾಡದಿಂದ ಮಂಜುನಾಥ ಕುನ್ನೂರ, ಬಿಜಾಪುರದಿಂದ ಪ್ರಕಾಶ್ ರಾಠೋಡ್, ಹಾಸನದಿಂದ ಬಿ. ಶಿವರಾಮ್ ಹೆಸರುಗಳು ಸಂಭಾವ್ಯರ ಪಟ್ಟಿಯಲ್ಲಿದ್ದು ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ವರಿಷ್ಠರು ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಲಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಉಡುಪಿ ಜಿಲ್ಲೆಯಲ್ಲೊಂದು ಚಾಪ್ಲಿನ್ ವಿವಾದ
ಮಾಯಾ ಪ್ರಧಾನಿಯಾಗಲು ಅಭ್ಯಂತರವಿಲ್ಲ: ಕುಮಾರ್
ಇವೆಂಟ್ಸ್ ಹೌಸ್ 'ಮುಖವಾಡ'ದ ರಂಗು
ಬೈಸಿಕಲ್ ವಿತರಣೆಗೆ ನೀತಿ ಸಂಹಿತೆ ಅಡ್ಡಿ
ಸ್ಪರ್ಧೆಗೆ ಅಪ್ಪನ ಬೆಂಬಲವಿರಲಿಲ್ಲ: ರಾಘವೇಂದ್ರ
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ