ಕಾಂಗ್ರೆಸ್ ಪಕ್ಷವು ಮಾರ್ಚ್ 23ರಂದು ಇಲ್ಲಿ ಲೋಕಸಭಾ ಚುನಾವಣಾ ಪ್ರಚಾರವನ್ನು ಆರಂಭಿಸಲಿದೆ ಎಂದು ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಎಚ್. ಹನುಮಂತಪ್ಪ ಹೇಳಿದ್ದಾರೆ.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಪ್ರಚಾರದ ಅಧಿಕೃತ ಆರಂಭದ ಸಮಾರಂಭಕ್ಕೆ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರುಗಳನ್ನು ಆಮಂತ್ರಿಸಿಲಾಗಿದೆ ಎಂದು ಹೇಳಿದ್ದಾರೆ. ಅವರಿಬ್ಬರಲ್ಲಿ ಯಾರಾದರೂ ಒಬ್ಬರು ಪಾಲ್ಗೊಳ್ಳುವ ಕುರಿತು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಹೊಸದಾಗಿ ಅನಾವರಣಗೊಂಡಿರುವ ತೃತೀಯ ರಂಗಕ್ಕೆ ಯಾವುದೇ ಅಸ್ತಿತ್ವ ಇಲ್ಲ ಎಂದು ಹೇಳಿದ ಅವರು, ನಿಜವಾದ ಸ್ಫರ್ಧೆ ಇರುವುದು ಎನ್‌ಡಿಎ ಮತ್ತು ಯುಪಿಎ ನಡುವೆ ಮಾತ್ರ ಎಂದು ಅಭಿಪ್ರಾಯಿಸಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಆಂತರಿಕ ಪ್ರಜಾಪ್ರಭುತ್ವ ಉಳಿದಿದೆ ಎಂದರಲ್ಲದೆ, ಭಿನ್ನಮತೀಯ ಚಟುವಟಿಕೆಗಳು ಕಾಂಗ್ರೆಸ್‌ಗೆ ಮಾತ್ರ ಸೀಮಿತವಲ್ಲ, ಎಲ್ಲಾ ಪಕ್ಷಗಳಲ್ಲೂ ವ್ಯಾಪಕವಾಗಿದೆ ಎಂದು ನುಡಿದರು. |