ಹೋಳಿ ಹಬ್ಬದ ದಿನಾಚರಣೆಯಂದು ಸಾಗುತ್ತಿದ್ದ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಯನ್ನು ಖಂಡಿಸಿರುವ ಹಿಂದೂ ಸಂಘಟನೆಗಳು ಸೋಮವಾರ ಮುಂಡಗೋಡು ಬಂದ್‌ಗೆ ಕರೆನೀಡಿದ್ದು, ಅಂಗಡಿ-ಮುಂಗಟ್ಟುಗಳು ಬಂದ್ ಮಾಡಿದ್ದು,ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಪಟ್ಟಣದಲ್ಲಿ ಹೋಳಿ ಹಬ್ಬದ ಪ್ರಯುಕ್ತ ಭಾನುವಾರ ಸಂಜೆ ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಲ್ಲು ತೂರಾಟದಿಂದ ಕಾಮನ ಮೂರ್ತಿ ಭಗ್ನಗೊಂಡಿತ್ತು. ಇದರಿಂದಾಗಿ ಕೆಲಹೊತ್ತು ಪರಿಸ್ಥಿತಿ ಉದ್ನಿಗ್ನಗೊಂಡಿದ್ದರಿಂದ ಸೆಕ್ಷನ್ 144 ಅನ್ನು ಜಾರಿಗೊಳಿಸಲಾಗಿತ್ತು.
ಪರಿಸ್ಥಿತಿ ಉದ್ವಿಗ್ನಗೊಂಡ ಪರಿಣಾಮ ರಸ್ತೆ ತುಂಬಾ ಕಲ್ಲು ಹಾಗೂ ಚಪ್ಪಲಿಗಳ ರಾಶಿ ಬಿದ್ದಿತ್ತು, ಆಟೋ ರಿಕ್ಷಾ ಜಖಂಗೊಂಡಿತ್ತು. ರಸ್ತೆ ಬದಿಯ ಹಲವಾರು ಅಂಗಡಿಗಳಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. |