ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಲೋಕಸಭೆ-26 ಕ್ಷೇತ್ರಗಳಲ್ಲಿ ಸ್ಪರ್ಧೆ: ದೇವೇಗೌಡ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಲೋಕಸಭೆ-26 ಕ್ಷೇತ್ರಗಳಲ್ಲಿ ಸ್ಪರ್ಧೆ: ದೇವೇಗೌಡ
ಮಂಗಳೂರು ಸಿಪಿಐ(ಎಂ)-ಚಿಕ್ಕಮಗಳೂರು ಸಿಪಿಐಗೆ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲಿ 26ರಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸೋಮವಾರ ಘೋಷಿಸಿದ್ದಾರೆ.

ಅಲ್ಲದೇ ಮಂಗಳೂರು ಕ್ಷೇತ್ರವನ್ನು ಸಿಪಿಐ(ಎಂ) ಹಾಗೂ ಚಿಕ್ಕಮಗಳೂರು ಕ್ಷೇತ್ರವನ್ನು ಸಿಪಿಐಗೆ ಬಿಟ್ಟು ಕೊಡಲು ನಿರ್ಧರಿಸಿದ್ದು, ಜೆಡಿಎಸ್ 26ರಲ್ಲಿ ಅಖಾಡಕ್ಕೆ ಇಳಿಯಲಿದೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.

ಮಾಜಿ ಮುಖ್ಯಮಂತ್ರಿ, ಪುತ್ರ ಎಚ್.ಡಿ.ಕುಮಾರಸ್ವಾಮಿಯವರೂ ಕೂಡ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಗೌಡರು ಪರೋಕ್ಷವಾಗಿ ಸೂಚನೆ ನೀಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾವು ಗೆಲ್ಲುವ ಕುದುರೆಗಳನ್ನೇ ಆಯ್ಕೆ ಮಾಡುತ್ತಿರುವುದಾಗಿ ಸ್ಪಷ್ಟಪಡಿಸಿದರು.

ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿಯವರು ಸ್ಪರ್ಧಿಸುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೌಡರು, ವಿಧಾನಸಭಾ ಚುನಾವಣೆಯಲ್ಲಿ ಯಾರು ಗೆಲುವು ಸಾಧಿಸಿದ್ದಾರೋ ಅಂತವರನ್ನು ಗಣನೆಗೆ ತೆಗೆದುಕೊಳ್ಳಲಾಗುವುದು ಎಂದರು.

ರಾಮನಗರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕುಮಾರಸ್ವಾಮಿ, 2004ರ ವಿಧಾನಸಭಾ ಚುನಾವಣೆ ಹಾಗೂ 2008ರ ಚುನಾವಣೆಯಲ್ಲೂ ಶಾಸಕರಾಗಿ ಪುನರಾಯ್ಕೆಯಾಗಿದ್ದರು. 1996ರಲ್ಲಿ ನಡೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕನಕಪುರ ಕ್ಷೇತ್ರದಿಂದ ಕುಮಾರಸ್ವಾಮಿ ಆಯ್ಕೆಯಾಗಿದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕರ್ನಾಟಕದಲ್ಲಿ ಮುಸ್ಲಿಮರ ಸ್ಥಿತಿ ಚಿಂತಾಜನಕವಾಗಿದೆ: ಅನಂತಮೂರ್ತಿ
ಮುತಾಲಿಕ್ ಪ್ರವೇಶ ನಿರ್ಬಂಧದ ಹಿಂದೆ ಡಿವಿ ಕೈವಾಡ?
ಬಿಜೆಪಿ ಬ್ಲ್ಯಾಕ್‌‌ಮೇಲ್ ರಾಜಕೀಯ ಮಾಡ್ತಿದೆ: ಡಿಕೆಶಿ
ಬೆಂಗಳೂರು: 13 ಸುಪಾರಿ ಹಂತಕರ ಬಂಧನ
ಯಡಿಯೂರಪ್ಪಗೆ ಅನಂತ್ ಹೊಗಳಿಕೆಯ ಸುರಿಮಳೆ!
ಲೋಕಸಭೆ: ಮಂಗಳೂರಿನಿಂದ ಪೂಜಾರಿ ಅಖಾಡಕ್ಕೆ