ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಆಡಳಿತದ ಕರ್ನಾಟಕದಿಂದಲೇ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ಮಾರ್ಚ್ 23ರಿಂದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡುವ ಸಾಧ್ಯತೆ ಇರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.
ಸೋನಿಯಾಗಾಂಧಿ ಅವರು ಮಾರ್ಚ್ 23ರಂದು ದಾವಣಗೆರೆಯಲ್ಲಿ ಪಕ್ಷದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ. ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಕರ್ನಾಟಕ ಇದೀಗ ಭಾಜಪದ ತೆಕ್ಕೆಯಲ್ಲಿದೆ. ಶತಾಯಗತಾಯ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಕೋಟೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಗಾಂಧಿ ಕರ್ನಾಟಕದಿಂದಲೇ ಪ್ರಚಾರ ಕಾರ್ಯಕ್ಕೆ ಇಳಿಯುವ ನಿರ್ಧಾರ ಕೈಗೊಂಡಿರುವುದಾಗಿ ಪಕ್ಷದ ವರಿಷ್ಠರು ಹೇಳಿದ್ದಾರೆ.
ಚುನಾವಣಾ ಪ್ರಚಾರದ ಜೊತೆಗೆ ಮಾರ್ಚ್ 26ರಂದು ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಪ್ರಕಟಿಸುವ ಸಾಧ್ಯತೆ ಇರುವುದಾಗಿಯೂ ತಿಳಿಸಿದೆ. |