ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಅಂಗಡಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ: ವಿದ್ಯಾಶಂಕರ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಅಂಗಡಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ: ವಿದ್ಯಾಶಂಕರ್
ಬೆಳಗಾವಿ ಧ್ವಜ ಪ್ರಕರಣ ವಿವಾದಕ್ಕೆ ಸಂಬಂಧಿಸಿದಂತೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಸಂಸದ ಸುರೇಶ್ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಚುನಾವಣಾ ಆಯೋಗ ಬುಧವಾರ ಸೂಚಿಸಿದೆ.

ಭಗವಾಧ್ವಜ ಹಾರಿಸಲು ಮುಂದಾಗಿ, ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವ ಸಂಸದ ಸುರೇಶ್ ಅಂಗಡಿ, ಶಾಸಕ ಸಂಜಯ ಪಾಟೀಲ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ರಾಜ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆ ನೂತನ ಕಟ್ಟಡದ ಮೇಲೆ ಭಗವಾಧ್ವಜ ಹಾರಿಸಲು ಎಂಇಎಸ್ ಕಾರ್ಯಕರ್ತರೊಂದಿಗೆ ಸಂಸದ ಸುರೇಶ್ ಅಂಗಡಿ, ಶಾಸಕ ಸಂಜಯ ಪಾಟೀಲ್ ಕೈಜೋಡಿಸಿದ ಘಟನೆ ವಿರೋಧ ಪಕ್ಷ ಹಾಗೂ ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು.

ಅಲ್ಲದೇ ಕನ್ನಡದ್ರೋಹಿ ಸಂಸದ, ಶಾಸಕರನ್ನು ಭಾರತೀಯ ಜನತಾ ಪಕ್ಷದಿಂದ ಉಚ್ಛಾಟಿಸಬೇಕೆಂದು ಕರವೇ ಸಂಘಟನೆ ಆಗ್ರಹಿಸಿ ಪ್ರತಿಭಟನೆ ನಡೆಸಿತ್ತು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬಿಜೆಪಿ ವಚನ ಭ್ರಷ್ಟ ಪಕ್ಷ: ಶಿವಪ್ಪ
ಸುರೇಶ್ ಅಂಗಡಿ-ಪಾಟೀಲ್‌ ಗಡಿಪಾರು ಮಾಡಿ: ಕಾಂಗ್ರೆಸ್
ಕೈದಿಗಳ ಪಾಲಿಗೆ 'ದೇವರಾದ' ದುನಿಯಾ ವಿಜಯ್
ಗೋವಾದಲ್ಲಿ ಶ್ರೀರಾಮಸೇನೆಗೆ ತಳವೂರಲು ಬಿಡಲ್ಲ: ರವಿ
ಕನ್ನಡ ನಾಡು-ನುಡಿ ರಕ್ಷಣೆಗೆ ಬಿಜೆಪಿ ಬದ್ಧ: ಸಿಎಂ
ಮಾ.23ರಂದು ಕಾಂಗ್ರೆಸ್ ಪಟ್ಟಿ ಬಿಡುಗಡೆ: ದೇಶಪಾಂಡೆ