ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್‌ಸಿಂಗ್ ಮತ್ತು ಅರುಣ್ ಜೇಟ್ಲಿ ನಡುವೆ ಯಾವುದೇ ಭಿನ್ನಮತ ಇಲ್ಲ. ಜೇಟ್ಲಿ ಎತ್ತಿರುವ ವಿಷಯಗಳ ಬಗ್ಗೆ ಪಕ್ಷ ಪರಿಶೀಲನೆ ನಡೆಸುತ್ತಿದೆ. ಇದನ್ನೇ ಭಿನ್ನಮತ ಎಂದು ಬಿಂಬಿಸುವುದು ಸರಿಯಲ್ಲ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ವೆಂಕಯ್ಯ ನಾಯ್ಡು ತಿಳಿಸಿದರು.
ಚುನಾವಣೆ ಸಿದ್ಧತೆಯಲ್ಲಿ ಜೇಟ್ಲಿ ಸಕ್ರಿಯರಾಗಿದ್ದಾರೆ. ಚುನಾವಣಾ ನಿರ್ವಹಣಾ ಸಮಿತಿ ಸಭೆಗೆ ನಾಲ್ಕು ಬಾರಿ ಹಾಜರಾಗಿದ್ದಾರೆ ಎಂದು ಅವರು ಹೇಳಿದರು.
ರಾಜ್ಯ ಕಾಂಗ್ರೆಸ್‌ನಲ್ಲಿ ಚುನಾವಣಾ ಕಣಕ್ಕಿಳಿಯಲು ಅಭ್ಯರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ. ಬಿಜೆಪಿ ವಿರುದ್ಧ ಸ್ಪಧಿಸುವುದು ಆ ಪಕ್ಷಗಳಿಗೆ ಕಷ್ಟವಾಗಿದೆ. ಯಡಿಯೂರಪ್ಪ ನೇತೃತ್ವದ ಸರ್ಕಾರದ ಸಾಧನೆಯನ್ನು ಜನ ಮೆಚ್ಚಿರುವುದೇ ಇದಕ್ಕೆ ಕಾರಣವಾಗಿದೆ ಎಂದರು.
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಬೆಂಗಳೂರು ದಕ್ಷಿಣ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ. ಅವರು ಕ್ಷೇತ್ರ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಆ ಕ್ಷೇತ್ರದ ಜನತೆ ಕಳೆದ ನಾಲ್ಕು ಅವಧಿಯಿಂದ ಅನಂತ್ ಕುಮಾರ್ ಅವರನ್ನು ಸಂಸತ್ತಿಗೆ ಕಳುಹಿಸುತ್ತಾ ಬಂದಿದ್ದಾರೆ. ಈ ಬಾರಿಯೂ ಕಳುಹಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. |