ಗುಜರಾತ್ ಮಾದರಿಯಲ್ಲಿ ರಾಜ್ಯವನ್ನು ಅಭಿವೃದ್ಧಿ ಪಡಿಸುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದರೂ ಕೂಡ, ಕರ್ನಾಟಕ ಗುಜರಾತ್‌ಕ್ಕಿಂತ ಕಳಪೆ ಆಡಳಿತ ನಡೆಸುವ ಮೂಲಕ ಆಡಳಿತರೂಢ ಬಿಜೆಪಿ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಗುಜರಾತ್‌ನಲ್ಲಿ ಎರಡು ತಿಂಗಳ ಕಾಲ ಗಲಭೆ ನಡೆಯಿತು, ಆದರೆ ಕರ್ನಾಟಕದಲ್ಲಿ ದಿನನಿತ್ಯ ಏನು ನಡೆಯುತ್ತಿದೆ ಎಂಬುದೇ ತಿಳಿಯುತ್ತಿಲ್ಲ ಎಂದು ಅವರು ಇಂದು ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಆತಂಕ ವ್ಯಕ್ತಪಡಿಸಿದರು.ಆಡಳಿತಾರೂಢ ಬಿಜೆಪಿ ಅತ್ಯಂತ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದ ಗೌಡರು, ಇದೊಂದು ತುಘಲಕ್ ದರ್ಬಾರ್ ಆಗಿದೆ. ಜಾತಿ-ಧರ್ಮದ ವಿಷಬೀಜ ಬಿತ್ತಿ, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಕೆಲಸಕ್ಕೆ ಬಿಜೆಪಿ ಮುಂದಾಗಿದೆ ಎಂದರು. |