ಕಾಂಗ್ರೆಸ್ ಪಕ್ಷದ ಶಿವಮೊಗ್ಗ ಅಭ್ಯರ್ಥಿ ಎಸ್. ಬಂಗಾರಪ್ಪ ಅವರಿಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದಕ್ಕಾಗಿ ಜಿಲ್ಲಾಧಿಕಾರಿ ನೋಟೀಸು ಜಾರಿ ಮಾಡಿದ್ದಾರೆ.
ಬಂಗಾರಪ್ಪ ಅವರು ಜಿಲ್ಲಾಡಳಿತದ ಅನುಮತಿ ಇಲ್ಲದೆ ಸಮಾವೇಶ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಇದರಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆಪಾದಿಸಲಾಗಿದೆ. ಶಿವಮೊಗ್ಗದ ಒಕ್ಕಲಿಗರ ಭವನದಲ್ಲಿ ಈ ಸಮಾವೇಶ ಆಯೋಜಿಸಲಾಗಿತ್ತು.
ಬಿಜೆಪಿಯು ಜಿಲ್ಲಾಡಳಿತಕ್ಕೆ ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ನೋಟೀಸು ಜಾರಿಯಾಗಿದೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದು ನಡೆಯುತ್ತಿದ್ದು, ಉಭಯ ಪಕ್ಷಗಳು ಯಾವುದೇ ಅವಕಾಶವನ್ನು ವ್ಯರ್ಥವಾಗಲು ಬಿಡುವಂತೆ ಕಾಣುತ್ತಿಲ್ಲ. |