ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದ ಜನರ ಒತ್ತಾಯದ ಮೇರೆಗೆ ಚುನಾವಣಾ ಕಣಕ್ಕಿಳಿಯಲು ಸಿದ್ಧನಿದ್ದೇನೆ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಅಲ್ಲದೆ ಚುನಾವಣೆಗೆ ಸ್ಪರ್ಧಿಸಲು ತಾವು ಹಿಂದೇಟು ಹಾಕುತ್ತಿಲ್ಲ ಇದೆಲ್ಲಾ ಮಾಧ್ಯಮಗಳ ಸೃಷ್ಟಿ ಎಂದರು.
ರಾಜ್ಯಸಭಾ ಸದಸ್ಯತ್ವದ ಅವಧಿ ಇನ್ನೂ ಐದೂವರೆ ವರ್ಷ ಇರುವುದರಿಂದ ತಮ್ಮನ್ನು ಕಣಕ್ಕಿಳಿಸಲು ಹೈಕಮಾಂಡ್ ಗೊಂದಲದಲ್ಲಿ ಇದೆ. ಮಂಗಳವಾರ ಅಥವಾ ಬುಧವಾರ ಪಕ್ಷದ ಸ್ಪಷ್ಟ ತೀರ್ಮಾನ ಹೊರಬೀಳಲಿದೆ ಎಂದು ಹೇಳಿದರು.
ತಾವು ಜನರ ಮುಂದೆ ಹೋಗಬೇಕೆಂದು ತೀರ್ಮಾನಿಸಿದ್ದೇನೆ. ಚುನಾವಣೆ ಸ್ಪರ್ಧೆ ಸಂಬಂಧ ಎಲ್ಲವೂ ಪಾರದರ್ಶಕವಾಗಿದ್ದು ಇದರಲ್ಲಿ ಗೊಂದಲದ ಮಾತೇ ಇಲ್ಲ ಎಂದು ತಿಳಿಸಿದರು.
|