ಕಾಂಗ್ರೆಸ್ ಪಕ್ಷದಲ್ಲಿ ಮುದುಕರಿದ್ದಾರೆ ಎಂಬ ಮುಖ್ಯಮಂತ್ರಿ ಯಡಿಯೂರಪ್ಪನವರ ಟೀಕೆಗೆ ಕಟುವಾಗಿ ಪ್ರತಿಕ್ರಿಯೆ ನೀಡಿರುವ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ವಿ.ಎಸ್.ಉಗ್ರಪ್ಪ, ಬಿಜಿಪಿ ಮುಖಂಡರಾದ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ, ಜಸ್ವಂತ್ ಸಿಂಗ್, ಯಶವಂತ ಸಿನ್ನಾ ಅವರೆಲ್ಲ ಯುವಕರೇ?ಎಂದು ಪ್ರಶ್ನಿಸಿದ ಅವರು, ಯಡಿಯೂರಪ್ಪನವರು ಚವನ ಪ್ರಾಶ ತೆಗೆದುಕೊಳ್ಳುತ್ತಾರಾ?ಎಂದು ಕುಟುಕಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ವಯಸ್ಸಾದವರೇ ಇದ್ದಾರೆ ಎಂದು ಹೇಳುವ ಯಡಿಯೂರಪ್ಪನವರ ಬಿಜೆಪಿ ಪಕ್ಷದಲ್ಲಿ ಎಲ್ಲರೂ ಯುವಕರಿದ್ದಾರೆಂದರೆ ಬಹುಶ ಚವನ ಪ್ರಾಶದ ಪ್ರಭಾವ ಇರಬಹುದು ಎಂದು ವ್ಯಂಗ್ಯವಾಡಿದರು. ಹಿರಿಯರ ಮಾರ್ಗದರ್ಶನದಲ್ಲಿ ಯುವಕರು ಕಾಂಗ್ರೆಸ್ ಪಕ್ಷದಲ್ಲಿ ಮುನ್ನಡೆಯುತ್ತಿದ್ದಾರೆ. ಅದಕ್ಕಾಗಿ ನಾವು ಯಡಿಯೂರಪ್ಪನವರಿಂದ ಪಾಠ ಹೇಳಿಸಿಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಕಿಡಿಕಾರಿದರು.
ಬಂಗಾರಪ್ಪ, ಎಸ್.ಎಂ.ಕೃಷ್ಣ, ಧರಂಸಿಂಗ್, ಖರ್ಗೆಯಂಥ ಯುವಕರಿಗೆ ಕಾಂಗ್ರೆಸ್ ಅಖಾಡಕ್ಕೆ ಇಳಿಸುತ್ತಿದೆ. ಆದರೆ ಬಿಜೆಪಿ ರಾಘವೇಂದ್ರ, ಶಿವಕುಮಾರ್ ಉದಾಸಿ, ಪ್ರಹ್ಲಾದ ಜೋಶಿಯಂಥ ಹಿರಿಯರನ್ನು ಕಣಕ್ಕೆ ಇಳಿಸಿದೆ ಎಂದು ಯಡಿಯೂರಪ್ಪ ಹುಬ್ಬಳ್ಳಿಯಲ್ಲಿ ವಿಜಯ ಸಂಕಲ್ಪ ಭವನ ಪ್ರಚಾರ ಕಾರ್ಯಾಲಯ ಉದ್ಘಾಟಿಸಿ ಮಾತನಾಡುತ್ತ ಟೀಕಾಪ್ರಹಾರ ನಡೆಸಿದ್ದರು. |