ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುವ ಯಾವುದೇ ಸಭೆಯಲ್ಲಿ ತಾನು ಭಾಗವಹಿಸಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಮುಖ್ಯಚುನಾವಣಾ ಆಯುಕ್ತ ಎನ್.ಗೋಪಾಲಸ್ವಾಮಿ ಅವರು ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಹುಬ್ಬಳ್ಳಿಯಲ್ಲಿ ಪಕ್ಷದ ಪ್ರಚಾರ ಸಭೆಯಲ್ಲಿ ತಡರಾತ್ರಿಯವರೆಗೂ ಭಾಗವಹಿಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ಅವರ ವಿರುದ್ಧ ಕ್ರಮ ಜರಗಿಸಲಾಗುವುದು ಎಂದು ತಿಳಿಸಿದ್ದರು.
ಆದರೆ ತಾನು ಹುಬ್ಬಳ್ಳಿಯಲ್ಲಿ ಪಕ್ಷದ ಹಿತೈಷಿಗಳೊಂದಿಗೆ ನಡೆಸಲಾದ ಸಭೆಯಲ್ಲಿ ಭಾಗವಹಿಸಿದ್ದೆ, ಅದು ಚುನಾವಣಾ ಪ್ರಚಾರ ಆಗಿರಲಿಲ್ಲ, ಈ ಸಂಬಂಧ ಮುಖ್ಯ ಚುನಾವಣಾ ಆಯುಕ್ತರು ತಮ್ಮ ಬಗ್ಗೆ ನಿಗಾ ಇರಿಸುವಂತೆ ಸೂಚಿಸಿರುವುದು ಸರಿಯಲ್ಲ ಎಂದು ಯಡಿಯೂರಪ್ಪ ತಿಳಿಸಿದರು.
ತಮ್ಮ ಬಗ್ಗೆ ಚುನಾವಣಾ ಆಯೋಗಕ್ಕೆ ಇರುವ ಅನುಮಾನಗಳನ್ನು ಪತ್ರ ಬರೆದು ಸರಿಪಡಿಸುವುದಾಗಿ ತಿಳಿಸಿದ ಯಡಿಯೂರಪ್ಪ ಮುಂದೆ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸದಂತೆ, ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಜಾಗೃತಿ ವಹಿಸುವುದಾಗಿ ಅವರು ಹೇಳಿದರು. |