ಏರ್ ಡೆಕ್ಕನ್ ಸಂಸ್ಥಾಪಕ ಕ್ಯಾ.ಗೋಪಿನಾಥ್ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಇಚ್ಚೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವ ಬಯಕೆ ವ್ಯಕ್ತಪಡಿಸಿರುವ ಅವರು, ಶೀಘ್ರದಲ್ಲೇ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎನ್ನುವುದನ್ನು ತಿಳಿಸುವುದಾಗಿ ಹೇಳಿದರು.
ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸ್ನೇಹಿತರು ಹಾಗೂ ಆಪ್ತರ ಸಲಹೆ ಮೇರೆಗೆ ಲೋಕಸಭೆಗೆ ಸ್ಪರ್ಧಿಸುವುದಾಗಿ ತಿಳಿಸಿದರು. ಯಾವುದೇ ರಾಷ್ಟ್ರೀಯ ಪಕ್ಷಗಳ ಚಿಹ್ನೆಯಡಿಯಲ್ಲಿ ಅಖಾಡಕ್ಕಿಳಿಯುವುದಿಲ್ಲ ಎಂದು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ಎಲ್ಲಾ ರಾಜಕೀಯ ಪಕ್ಷಗಳು ಸ್ವಾರ್ಥ ರಾಜಕಾರಣ ಮಾಡುತ್ತಿರುವುದಾಗಿ ಅಭಿಪ್ರಾಯವ್ಯಕ್ತಪಡಿಸಿದ ಕ್ಯಾ.ಗೋಪಿನಾಥ್, ಪ್ರತಿಯೊಂದು ರಾಜಕೀಯ ಪಕ್ಷಗಳು ತತ್ವ, ಸಿದ್ದಾಂತಗಳನ್ನು ಗಾಳಿಗೆ ತೂರಿ, ಉದ್ಯಮಿಗಳೊಂದಿಗೆ, ಭ್ರಷ್ಟರೊಂದಿಗೆ, ಕ್ರಿಮಿನಲ್‌ಗಳ ಜತೆ ಕೈಜೋಡಿಸಿರುವುದಾಗಿ ಆಪಾದಿಸಿದರು. |