ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಕೋಮು ಆಧಾರಿತ ಮೀಸಲಾತಿಯನ್ನು ಪ್ರಕಟಿಸಿದೆ. ಇದು ದೇಶವನ್ನು ವಿಭಜನೆ ಮಾಡುವ ಪ್ರಯತ್ನ ಎಂದು ಬಿಜೆಪಿ ಮುಖಂಡ ವೆಂಕಯ್ಯನಾಯ್ಡು ತಿಳಿಸಿದ್ದಾರೆ.ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ಈ ಮೀಸಲಾತಿಗೆ ಅವಕಾಶ ನೀಡುವುದಿಲ್ಲ, ರಕ್ತ ಹರಿದರೂ ಸರಿಯೇ ಕೋಮು ಆಧಾರಿತ ಮೀಸಲಾತಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಗುಡುಗಿದ್ದಾರೆ.ಗುರುವಾರ ನಗರಕ್ಕಾಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಅವರು, 2004ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಗಳನ್ನು ಈಡೇರಿಸಲಾಗಿದೆ ಎನ್ನುವ ಬಗ್ಗೆ ಪ್ರಧಾನ ಮಂತ್ರಿಗಳು ಶ್ವೇತಪತ್ರ ಪ್ರಕಟಿಸಲಿ ಎಂದು ಆಗ್ರಹಿಸಿದರು.ಕೇಂದ್ರ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳಲು ಬಿಜೆಪಿ ಪ್ರಧಾನಿ ಅಭ್ಯರ್ಥಿ ಎಲ್.ಕೆ.ಆಡ್ವಾಣಿ ವಿರುದ್ಧ ಅನಗತ್ಯ ಟೀಕೆಗಳನ್ನು ಮಾಡುತ್ತಾ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ನಡೆಸಿದ್ದಾರೆ ಎಂದರು. ಅಲ್ಲದೇ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಯಾವುದೇ ಜನಪರ ವಿಚಾರಗಳಿಲ್ಲ ಎಂದವರು ಹರಿಹಾಯ್ದರು. |