ಮಾಜಿ ಸಚಿವ ಡಿ. ಮಂಜುನಾಥ್ ಅವರಿಗೆ ಟಿಕೆಟ್ ನೀಡದಿರುವಂತೆ ಮಾದಿಗ ದಂಡೋರ ಸಮಿತಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರನ್ನು ಒತ್ತಾಯಿಸಿದೆ. ಮಂಜುನಾಥ್ ಅವರಿಗೆ ಚಿತ್ರದುರ್ಗದಿಂದ ಟಿಕೆಟ್ ನೀಡಬಾರದೆಂದು ಜೆಡಿಎಸ್ ವರಿಷ್ಠರಿಗೆ ಸಮಿತಿಯ ಮುಖಂಡರು ಮನವಿ ಮಾಡಿದ್ದಾರೆ.
ಮಂಜುನಾಥ್ ಅವರು ಪರಿಶಿಷ್ಟ ಜಾತಿಯ ಎಲ್ಲಾ ರಾಜಕೀಯ ಸವಲತ್ತುಗಳನ್ನು ಅನುಭವಿಸಿದ್ದರೂ ಚಿತ್ರದುರ್ಗ ಜಿಲ್ಲೆಯ ಹಾಗೂ ಪರಿಶಿಷ್ಟ ಜನಾಂಗದ ಅಭಿವೃದ್ದಿ ಕೆಲಸ ಮಾಡುವಲ್ಲಿ ವಿಫಲವಾಗಿರುವ ಕಾರಣ ಟಿಕೆಟ್ ನೀಡಬಾರದೆಂಬುದು ಸಮಿತಿಯ ಆರೋಪವಾಗಿದೆ.
ಈ ಕುರಿತು ಮಾಹಿತಿ ನೀಡಿದ ಸಮಿತಿಯ ಚಿತ್ರದುರ್ಗ ಜಿಲ್ಲಾಧ್ಯಕ್ಷ ಬಬ್ಬೂರು ಪರಮೇಶ್ವರಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಕೆ. ಗುರುಶಾಮಯ್ಯ ಅವರು ಜಂಟಿಯಾಗಿ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವದ ಅನುಸಾರ ಮೀಸಲಾತಿ ಸೌಲಭ್ಯವನ್ನು ಪ್ರತಿಯೊಬ್ಬ ಸಾಮಾನ್ಯ ದಲಿತನಿಗೂ ತಲುಪಿಸುವ ಕಾರ್ಯ ಕೈಗೊಳ್ಳುವ ಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದರು. |