ಮೇವರಿಕ್ ಲಂಚ ಆರೋಪ ಪ್ರಕರಣದ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರವಾಗಿ ಸರ್ಕಾರ ತಮ್ಮ ವಿರುದ್ಧ ಹೂಡಿರುವ ಮಾನನಷ್ಟ ಮೊಕದ್ದಮೆಯನ್ನು ವಜಾಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಅದೇ ರೀತಿ ವೀರಶೈವ ಸ್ವಾಮೀಜಿಗಳ ವಿರುದ್ಧ ತಾವು ಅವಹೇಳನಕಾರಿಯಾಗಿ ಮಾತಾಡಿದ್ದೇನೆ ಎಂದು ಆರೋಪಿಸಿ ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಯನ್ನೂ ವಜಾಗೊಳಿಸುವಂತೆ ಕೋರಿ ಪ್ರತ್ಯೇಕ ಅರ್ಜಿಯೊಂದನ್ನು ಸಲ್ಸಿಸಿದ್ದಾರೆ.
ಈ ಎರಡೂ ಅರ್ಜಿಗಳು ನ್ಯಾಯಮೂರ್ತಿ ಡಾ.ಕೆ.ಭಕ್ತವತ್ಸಲ ಅವರಿದ್ದ ಏಕಸದಸ್ಯ ಪೀಠದ ಮುಂದೆ ಬಂದಿದ್ದು, ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದೆ.
ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೆಚ್ಚುವರಿ ಸಿಟಿ ಸಿವಿಲ್ ನ್ಯಾಯಾಲಯ ಎಚ್.ಡಿ.ಕುಮಾರಸ್ವಾಮಿಗೆ ಸಮನ್ಸ್ ಜಾರಿ ಮಾಡಿದ್ದು, ಏಪ್ರಿಲ್ ತಿಂಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿತ್ತು. |