ಕರ್ನಾಟಕ ಸೇರಿದಂತೆ ವಿವಿಧ ಕ್ಷೇತ್ರಗಳ ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಮೀನಮೇಷ ಎಣಿಸುತ್ತಿರುವ ಕಾಂಗ್ರೆಸ್ ಪಕ್ಷ ಕೊನೆಗೂ ಶನಿವಾರ ಸಂಜೆಯೊಳಗೆ ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದೆ.
ಶುಕ್ರವಾರ ಸಂಜೆ ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಸುದ್ದಿಗಾರರೊಂದಿಗೆ ಮಾತನಾಡುತ್ತ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ನಾಳೆ ಸಂಜೆಯೊಳಗೆ ಘೋಷಿಸುವುದಾಗಿ ಹೇಳಿದ್ದಾರೆ.
ಏಪ್ರಿಲ್ 2ರಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದ ಜೆಡಿಎಸ್, ಯುಗಾದಿಯ ಶುಭ ದಿನದಂದು ಸಿಹಿ ಸುದ್ದಿ ಎಂಬಂತೆ ಶುಕ್ರವಾರ ಸಂಜೆ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರು ತಮ್ಮ ನಿವಾಸದಲ್ಲಿ 18ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಬಿಜೆಪಿ ಈಗಾಗಲೇ 24ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, 4ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಇನ್ನೂ ಘೋಷಿಸಿಲ್ಲ, ಬಿಜೆಪಿ ಕಾದು ನೋಡುವ ತಂತ್ರ ಅನುಸರಿಸಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗಾಗಿಯೇ ಕಾಯುತ್ತಿದೆ. |