ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಶಾಸಕ ಯೋಗೇಶ್ವರ್ 'ಕಾಂಗ್ರೆಸ್‌ಗೆ ಗುಡ್‌ಬೈ'
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಶಾಸಕ ಯೋಗೇಶ್ವರ್ 'ಕಾಂಗ್ರೆಸ್‌ಗೆ ಗುಡ್‌ಬೈ'
ಚನ್ನಪಟ್ಟಣದ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್‌ಗೆ ಗುಡ್ ಬೈ ಹೇಳಿ ಭಾಜಪ ಪಾಳಯಕ್ಕೆ ಸೇರ್ಪಡೆಗೊಂಡಿದ್ದಾರೆ.

ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡಿರುವ ಶಾಸಕ ಯೋಗೇಶ್ವರ, ಶೀಘ್ರದಲ್ಲೇ ಬಿಜೆಪಿ ಸೇರುವುದಾಗಿ ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದರು. ಆ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಯಲ್ಲಿ ಸ್ಪೀಕರ್ ಜಗದೀಶ್ ಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡಿ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆ ಸ್ವೀಕರಿಸಿರುವುದಾಗಿ ಈ ಸಂದರ್ಭದಲ್ಲಿ ಶೆಟ್ಟರ್ ತಿಳಿಸಿದರು. ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಮೌಲ್ಯ ಉಳಿದಿಲ್ಲ ಎಂದು ಆರೋಪಿಸಿರುವ ಯೋಗೇಶ್ವರ್, ನಾಯಕರ ಕೀಳುಮಟ್ಟದ ರಾಜಕೀಯಕ್ಕೆ ಬೇಸತ್ತು ರಾಜೀನಾಮೆ ನೀಡಿರುವುದಾಗಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.

ಕಾಂಗ್ರೆಸ್ ತೊರೆದಿದ್ದು, ಬಿಜೆಪಿಗೆ ಸೇರ್ಪಡೆಗೊಂಡಿರುವುದಾಗಿ ಅವರು ಸ್ಪಷ್ಟಪಡಿಸಿದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ದೇವೇಗೌಡರ ವಿರುದ್ಧ ಸ್ಪರ್ಧಿಸುವುದಿಲ್ಲ: ಅಶೋಕ್ ಖೇಣಿ
ಎಂ.ಪಿ.ಪ್ರಕಾಶ್ ಗೋಮುಖ ವ್ಯಾಘ್ರ: ಜನಾರ್ದನ ರೆಡ್ಡಿ
ಬಂಗಾರಪ್ಪಗೆ ತಾಕತ್ತಿದ್ದರೆ ಕ್ಷೇತ್ರಕ್ಕೆ ಕಾಲಿಡಬಾರದು: ಸಿಎಂ
ನನಗೆ ಮುಸ್ಲಿಮರ ಮತ ಬೇಡ: ಅನಂತಕುಮಾರ್ ಹೆಗಡೆ
ಪಟ್ಟಿ ಬಿಡುಗಡೆ: ಕಾಂಗ್ರೆಸ್‌‌ನಲ್ಲಿ ಭುಗಿಲೆದ್ದ ಭಿನ್ನಮತ
ಉಳ್ಳಾಲದಲ್ಲಿ ದಾವೂದ್ ಸಹಚರರ ಬಂಧನ