ತುಮಕೂರು ವಿಶ್ವವಿದ್ಯಾಲಯಕ್ಕೆ ತನ್ನ ಹೆಸರು ಇಡುವುದು ಬೇಡ ಎಂದು ತುಮಕೂರು ಸಿದ್ದಗಂಗಾ ಮಠದ ಶತಾಯುಷಿ ಡಾ.ಶಿವಕುಮಾರ ಸ್ವಾಮೀಜಿ ತಿಳಿಸಿದ್ದಾರೆ.ಸೋಮವಾರ ಸಿದ್ದಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ವಿವಿಗೆ ನನ್ನ ಹೆಸರು ಇಡುವುದಕ್ಕೆ ನನಗೆ ಆಸಕ್ತಿ ಇಲ್ಲ. ಅಲ್ಲದೇ ಹೆಸರಿಡುವ ಬಗ್ಗೆ ಮುಖ್ಯಮಂತ್ರಿಗಳು ನನ್ನ ಗಮನಕ್ಕೆ ತಾರದೇ ಘೋಷಣೆ ಮಾಡಿದ್ದಾರೆ ಎಂದು ಹೇಳಿದರು. ವಿವಿಗೆ ನನ್ನ ಹೆಸರು ಇಡುವುದು ಬೇಡ ಎಂಬ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದರು.ಇದಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಕೂಡ, ವಿವಿಗೆ ನನ್ನ ಹೆಸರಿಡುವ ಬಗ್ಗೆ ಇಚ್ಚೆ ವ್ಯಕ್ತಪಡಿಸಿದ್ದರು. ಆ ಸಂದರ್ಭದಲ್ಲೂ ಕೂಡ ನಾನು ನನ್ನ ಹೆಸರಿಡುವುದು ಬೇಡ ಎಂದು ಹೇಳಿರುವುದಾಗಿ ಸ್ಪಷ್ಟಪಡಿಸಿದರು. |