ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಲ್ಲಿ ಪ್ರಥಮ ಸ್ಥಾನದಲ್ಲಿರುವ ಬಿಜೆಪಿ ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಹಿಂದೇಟು ಹಾಕುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಆರೋಪಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಈವರೆಗೆ 58ಪ್ರಕರಣಗಳಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದೆ. ಅದರಲ್ಲೂ ಮುಖ್ಯಮಂತ್ರಿಗಳ ಪುತ್ರ ಸ್ಪರ್ಧಿಸಿರುವ ಶಿವಮೊಗ್ಗ ಹಾಗೂ ಗಣಿದಣಿಗಳಿರುವ ಬಳ್ಳಾರಿಯಲ್ಲಿ ಹೆಚ್ಚು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದರೂ ಆಯೋಗ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದರು.
ಶಿವಮೊಗ್ಗದಲ್ಲಿ 34ಲಕ್ಷ ರೂ.ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ. ಬಳ್ಳಾರಿಯಲ್ಲಿ ಎಲ್ಲ ಅಧಿಕಾರಿಗಳು ಅಲ್ಲಿನ ಮೂವರು ಸಚಿವರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ದೂರಿದರು.
ಈ ಕುರಿತು ಆಯೋಗಕ್ಕೆ ಪತ್ರ ಬರೆದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು. ಕೆನರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಹೆಗಡೆ ಅವರ ನಾಲಿಗೆ ಮೇಲೆ ನಿಯಂತ್ರಣವೇ ಇಲ್ಲ ಎಂದು ಕಿಡಿಕಾರಿದರು. |