ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಎಚ್‌ಡಿಕೆ - ಜಮೀರ್ - ಕತ್ತಿ ನಾಮಪತ್ರ ಸಲ್ಲಿಕೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಎಚ್‌ಡಿಕೆ - ಜಮೀರ್ - ಕತ್ತಿ ನಾಮಪತ್ರ ಸಲ್ಲಿಕೆ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಗುಲ್ಬರ್ಗಾ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ, ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಜಮೀರ್ ಅಹ್ಮದ್, ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್, ಚಿಕ್ಕೋಡಿ ಕ್ಷೇತ್ರದಿಂದ ಬಿಜೆಪಿಯ ರಮೇಶ್ ಕತ್ತಿ ಅವರು ಬುಧವಾರ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಯ ನಾಲ್ಕನೆ ದಿನವಾದ ಇಂದು ಮಧ್ನಾಹ್ನ ಕುಮಾರಸ್ವಾಮಿ ಅವರು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಜಮೀರ್ ಅಹಮದ್ ಖಾನ್ ಮತ್ತು ಉತ್ತರ ಕ್ಷೇತ್ರದಿಂದ ಆರ್.ಸುರೇಂದ್ರ ಬಾಬು ಅವರು ಜೆಡಿಎಸ್ ಅಭ್ಯರ್ಥಿಗಳಾಗಿ ತಮ್ಮ ನಾಮಪತ್ರ ಸಲ್ಲಿಸಿದ ಪ್ರಮುಖ ಹುರಿಯಾಳುಗಳಾಗಿದ್ದಾರೆ.

ಅಲ್ಲದೆ ಕೋಲಾರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಿ.ಎಸ್.ವೀರಯ್ಯ ಬೆಂಬಲಿಗರೊಂದಿಗೆ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ರಾಜ್ಯದಲ್ಲಿ ಮೊದಲನೆ ಹಂತದ ಚುನಾವಣೆ ಏಪ್ರಿಲ್ 23ರಂದು ನಡೆಯಲಿದೆ. 17ಲೋಕಸಭಾ ಕ್ಷೇತ್ರಗಳಲ್ಲಿ ನಡೆಯುವ ಚುನಾವಣೆಗೆ ಈ ತಿಂಗಳ 4ರಂದು ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ದಾವೂದ್‌ ಬಂಟರಿಂದ ಮುತಾಲಿಕ್ ಹತ್ಯೆಗೂ ಸಂಚು
ರೆಡ್ಡಿ ಜೈಲುಪಾಲಾಗೋದು ಗ್ಯಾರಂಟಿ: ಕುಮಾರಸ್ವಾಮಿ
ಮಡಿಕೇರಿ: ಮೂವರು ಹಂತಕರಿಗೆ ಗಲ್ಲು ಶಿಕ್ಷೆ
ಕಾರವಾರ: ಭೀಕರ ಅಫಘಾತಕ್ಕೆ ಸುರತ್ಕಲ್‌ನ ನಾಲ್ವರು ಬಲಿ
ಬ್ಲಾಕ್‌ಮೇಲ್ ಮೂಲಕವೇ ಸಿದ್ದು ರಾಜಕಾರಣ: ಎಚ್‌ಡಿಕೆ
ಲೋಕಸಭೆ-ಗೆದ್ದೇ ಗೆಲ್ಲುವೆ: ಮಲ್ಲಿಕಾರ್ಜುನ ಖರ್ಗೆ