ಮತದಾರರಿಗೆ ಆಮಿಷವೊಡ್ಡಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ.
ಮಾರ್ಚ್ 29ರಂದು ನಗರದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತಮಿಳು ಸಮಾವೇಶದಲ್ಲಿ ಮತದಾರರಿಗೆ ಆಮಿಷ ಒಡ್ಡಿದ ಹಿನ್ನೆಲೆಯಲ್ಲಿ ಭಾರತೀಯ ದಂಡ ಸಂಹಿತೆ ಕಲಂ 171ರಡಿ ಮತ್ತು ಪ್ರಜಾಪ್ರತಿನಿಧಿ ಕಾಯ್ದೆಯ ಕಲಂ 123ರ ಅಡಿಯಲ್ಲಿ ಯಡಿಯೂರಪ್ಪ ಅವರ ವಿರುದ್ಧ ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಂಕಜ್ ಕುಮಾರ್ ಪಾಂಡೆ ತಿಳಿಸಿದ್ದಾರೆ.
ನಗರದಲ್ಲಿ ತಮಿಳು ಸಮಾವೇಶ ನಡೆಸಿ, ತಮಿಳರನ್ನು ಓಲೈಸಿದ್ದಕ್ಕಾಗಿ ಮುಖ್ಯಮಂತ್ರಿಗಳು ಕನ್ನಡಿಗರ ಕ್ಷಮೆಯಾಚಿಸಬೇಕೆಂದು ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ಆಗ್ರಹಿಸಿದ್ದರು. |