ಏಪ್ರಿಲ್ 23ರಂದು 17ಲೋಕಸಭಾ ಕ್ಷೇತ್ರಗಳಿಗೆ ನಡೆಯಲಿರುವ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಬಿರುಸಾಗಿದ್ದು, ಗುರುವಾರ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಸಚಿವ ಜನಾರ್ದನ ಪೂಜಾರಿ, ಸಂಸದ ಸುರೇಶ್ ಅಂಗಡಿ, ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಸೇರಿದಂತೆ ಹಲವರು ನಾಮಪತ್ರ ಸಲ್ಲಿಸಿದ್ದಾರೆ.ಪ್ರಥಮ ಹಂತದ ಚುನಾವಣೆಗೆ ಏಪ್ರಿಲ್ 4ರಂದು ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದ್ದು, ಇಂದು ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ.ವೀರಪ್ಪ ಮೊಯ್ಲಿ, ಮಂಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜನಾರ್ದನ ಪೂಜಾರಿ, ಕಾರವಾರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅನಂತಕುಮಾರ್ ಹೆಗಡೆ, ಬೆಳಗಾವಿಯಿಂದ ಬಿಜೆಪಿ ಸಂಸದ ಸುರೇಶ್ ಅಂಗಡಿ, ಕಾಂಗ್ರೆಸ್‌ನ ಅಮರ್‌ಸಿಂಗ್ ಪಾಟೀಲ್ ನಾಮಪತ್ರ ಸಲ್ಲಿಸಿದರು.ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಾಳಯ ಸೇರಿದ್ದ ಸಿ.ಪಿ.ಯೋಗೇಶ್ವರ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. |