ಸಮಾಜದಲ್ಲಿ ಕೋಮು ಭಾವನೆಯನ್ನು ಕೆರಳಿಸುವ ಹೇಳಿಕೆಯನ್ನು ನೀಡಿರುವ ಕಾರವಾರ ಲೋಕಸಭಾ ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಹೆಗಡೆಗೆ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಯು.ಆರ್.ಅನಂತಮೂರ್ತಿ ಆಗ್ರಹಿಸಿದ್ದಾರೆ.ಗುರುವಾರ ಖಾಸಗಿ ಟಿವಿ ಚಾನೆಲ್‌ವೊಂದರ ಜತೆ ಮಾತನಾಡಿದ ಅವರು, ಮುಸ್ಲಿಂ ಸಮುದಾಯದ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿರುವ ಹೆಗಡೆಯಂತಹವರಿಗೆ ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎನ್ನುವುದು ತನ್ನ ಸ್ಪಷ್ಟ ಅಭಿಪ್ರಾಯ ಎಂದು ತಿಳಿಸಿದ್ದಾರೆ.ಮುಸ್ಲಿಮ್ ಸಮುದಾಯವದವರು ಭಯೋತ್ಪಾದನೆಯಂತಹ ಚಟುವಟಿಕೆಗಳನ್ನು ನಿಲ್ಲಿಸದಿದ್ದಲ್ಲಿ ಈದ್ ಮಿಲಾದ್, ಬಕ್ರೀದ್ ಹಬ್ಬಗಳನ್ನು ಆಚರಿಸಲು ಅವಕಾಶ ನೀಡುವುದಿಲ್ಲ ಎಂದಿದ್ದರು. ಅದೇ ರೀತಿ ತನಗೆ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದವರ ಮತದ ಅಗತ್ಯವಿಲ್ಲ, ತನಗೆ ಹಿಂದೂಗಳ ಮತ ಮಾತ್ರ ಸಾಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.ಸಂಸದ, ಕಾರವಾರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಹೆಗಡೆ ಅವರ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು ನೀಡಿರುವ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. |