ಆಪರೇಶನ್ ಕಮಲ ಮುಂದುವರಿಸುವ ಮೂಲಕ ಬಿಜೆಪಿ ಭರ್ಜರಿ ಬೇಟೆಯಲ್ಲೇ ತೊಡಗಿದ್ದು, ಇದೀಗ ಕಾಂಗ್ರೆಸ್ ಶಾಸಕ ವಿ.ಸೋಮಣ್ಣ ಕೂಡ ಬಿಜೆಪಿ ಪಾಳಯಕ್ಕೆ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತವಾಗಿದೆ.
ಕಾಂಗ್ರೆಸ್ ನಾಯಕರ ನಡವಳಿಕೆಯಿಂದ ಬೇಸರಗೊಂಡಿರುವುದಾಗಿ ತಿಳಿಸಿರುವ ಸೋಮಣ್ಣ, ಸ್ವಾಭಿಮಾನಕ್ಕೆ ಧಕ್ಕೆ ಬಂದಿದ್ದರಿಂದ ಕಾಂಗ್ರೆಸ್ ತೊರೆಯುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಶಾಸಕ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಲಿದ್ದೇನೆ ಎಂದು ಪ್ರತಿಕ್ರಿಯಿಸಿರುವ ಅವರು, ಬೆಂಬಲಿಗರ ಸಭೆಯ ನಂತರ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಅಲ್ಲದೇ ಲೋಕಸಭೆಗೆ ಸ್ಪರ್ಧಿಸುವ ಇಚ್ಚೆಯಿಂದ ಬಿಜೆಪಿ ಸೇರುತ್ತಿಲ್ಲ, ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಈ ಸಂದರ್ಭದಲ್ಲಿ ಹೇಳಿದರು. ಕ್ಷೇತ್ರದ ಜನ ಸೇವೆಯೇ ಮುಖ್ಯ ಗುರಿ ಎಂದರು. |