ಹಿಂದುತ್ವದ ವಿರುದ್ಧ ಮಾತನಾಡುವ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ದ ಕಿಡಿಕಾರಿರುವ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಹಿಂದುತ್ವದ ವಿರುದ್ಧ ಮಾತನಾಡುವವರ 'ಕತ್ತು ಕತ್ತರಿಸಿ' ಎಂದು ತಿಳಿಸಿದ್ದಾರೆ.ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುತ್ವ ಎನ್ನುವವರ ಕೈ ಕಡಿಯಿರಿ ಎಂಬ ಹೇಳಿಕೆ ನೀಡಿರುವ ಕಾಗೋಡು ತಿಮ್ಮಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದುತ್ವದ ಬಗ್ಗೆ ಅವಹೇಳನ ಮಾಡುವವರ ಕತ್ತು ಕತ್ತರಿಸಬೇಕು ಎಂದು ಗುಡುಗಿದರು.ಕಾಂಗ್ರೆಸ್, ಜೆಡಿಎಸ್‌ನವರು ಕೇವಲ ವೋಟ್ ಬ್ಯಾಂಕ್ ರಾಜಕೀಯ ಮಾಡಬಾರದು, ಈ ಹಿಂದೆ ಅವರೇ ಅಧಿಕಾರದಲ್ಲಿದ್ದಾಗ ಅಲ್ಪಸಂಖ್ಯಾತರ ಏಳಿಗೆಗಾಗಿ ಏನು ಮಾಡಿದ್ದಾರೆ?ಎಂದು ಪ್ರಶ್ನಿಸಿದರು. ಅಭಿವೃದ್ಧಿ ಬಗ್ಗೆ ಮಾತನಾಡಿದ್ರೆ ಅದನ್ನು ಸ್ವಾಗತಿಸುತ್ತೇವೆ ಎಂದರು.ಆದರೆ ಕಾಂಗ್ರೆಸ್ ಮುಖಂಡರು ಹಿಂದುತ್ವದ ವಿರುದ್ಧ ಬಾಯಿಗೆ ಬಂದ ಹಾಗೇ ಮಾತನಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಾರವಾರ ಲೋಕಸಭಾ ಅಭ್ಯರ್ಥಿ ಅನಂತಕುಮಾರ್ ಹೆಗಡೆ ಪ್ರಚೋದನಾಕಾರಿ ಭಾಷಣ ಮಾಡಿದ ಬೆನ್ನಲ್ಲೇ, ಕಾಂಗ್ರೆಸ್ ಮುಖಂಡ ಕಾಗೋಡು ಕೂಡ ಉದ್ರೇಕಕಾರಿ ಭಾಷಣ ಮಾಡಿದ್ದರು. ಇದೀಗ ರೇಣುಕಾಚಾರ್ಯ ಕೂಡ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ. |