ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಅಧಿಕಾರ ಬಿಟ್ಟಿರಲು ಕಾಂಗ್ರೆಸ್‌ಗೆ ಸಾಧ್ಯವಿಲ್ಲ: ಆಡ್ವಾಣಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಅಧಿಕಾರ ಬಿಟ್ಟಿರಲು ಕಾಂಗ್ರೆಸ್‌ಗೆ ಸಾಧ್ಯವಿಲ್ಲ: ಆಡ್ವಾಣಿ
ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್ ಯಾವ ಮಟ್ಟಕ್ಕಿಳಿಯಲೂ ಹೇಸುವುದಿಲ್ಲ ಎಂದು ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್.ಕೆ.ಆಡ್ವಾಣಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಬೆಳಗಾವಿಯಲ್ಲಿ ಮಂಗಳವಾರ ಏರ್ಪಡಿಸಲಾದ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಅಧಿಕಾರ ಬಿಟ್ಟು ಇರಲು ಆಗದು. ಆ ಕಾರಣಕ್ಕಾಗಿ ಅಧಿಕಾರಕ್ಕೆ ಏರಲು ಕಾಂಗ್ರೆಸ್ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳಲು ಸಿದ್ದವಿದೆ. ನಾಗರಿಕ ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಯುಪಿಎ ಸರ್ಕಾರದಿಂದ ಹೊರನಡೆದ ಎಡಪಕ್ಷಗಳೊಂದಿಗೆ ಚುನಾವಣೆ ನಂತರ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮಾತನಾಡುತ್ತಿರುವ ಕಾಂಗ್ರೆಸ್ ಪಕ್ಷದ ನೀತಿ ಹೇಸಿಗೆ ಹುಟ್ಟಿಸುತ್ತದೆ ಎಂದು ಟೀಕಿಸಿದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಆಶೀರ್ವದಿಸಿ ಬಿಜೆಪಿ ಕೈ ಬಲಪಡಿಸಬೇಕು ಎಂದು ನೆರೆದಿದ್ದ ಜನಸ್ತೋಮಕ್ಕೆ ಆಡ್ವಾಣಿ ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.

ಕಾಂಗ್ರೆಸ್ ಆಡಳಿತವಿರುವ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಲ್ಲಿ ಜನರ ಪರಿಸ್ಥಿತಿ ಯಾವ ಮಟ್ಟದಲ್ಲಿದೆ ಎಂಬುದಕ್ಕೆ ಅಲ್ಲಿ ನಿರಂತರವಾಗಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವುದೇ ಸಾಕ್ಷಿಯಾಗಿದೆ ಎಂದು ದೂರಿದರು. ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಿಂದ ಕಾಂಗ್ರೆಸ್ ಪಕ್ಷ ಧೂಳಿಪಟವಾಗಲಿದೆ ಎಂದು ಭವಿಷ್ಯ ನುಡಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಎನ್‌ಡಿಎ ಅಧಿಕಾರದ ಗದ್ದುಗೆ ಏರಿದ್ರೆ ಗೋಹತ್ಯೆ ನಿಷೇಧ: ಅನಂತಕುಮಾರ್
ಹಿಂದುತ್ವ ಖಂಡಿಸ್ತೇನೆ-ನನ್ನ ತಲೆ ಕತ್ತರಿಸ್ತೀರಾ?: ಸಿದ್ದರಾಮಯ್ಯ ಸವಾಲು
ಬಂಧನದ ಹಿಂದೆ ಕರಂದ್ಲಾಜೆ ಕೈವಾಡ: ಮುತಾಲಿಕ್
ಸಚಿವೆ ಶೋಭಾ ಕರಂದ್ಲಾಜೆಗೆ ಗ್ರಾಮಸ್ಥರಿಂದ ಘೇರಾವ್
ಬೆಂಗಳೂರು: ಐವರು ದರೋಡೆಕೋರರ ಸೆರೆ
ಸುಳ್ಳು ಸುದ್ದಿ ಹಬ್ಬಿಸುವುದರಲ್ಲಿ ಬಿಜೆಪಿ ನಂ-1: ಪೂಜಾರಿ