ಹಿಂದುತ್ವದ ಬಗ್ಗೆ ಮಾತನಾಡುವವರ ಕೈ ಕತ್ತರಿಸಿ ಎಂಬ ಪ್ರಚೋದನಾಕಾರಿ ಹೇಳಿಕೆ ನೀಡಿ ಚುನಾವಣಾ ಆಯೋಗದ ಕೆಂಗಣ್ಣಿಗೆ ಗುರಿಯಾಗಿರುವ ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಅವರಿಗೆ ಜಾಮೀನು ನೀಡಲು ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ನಿರಾಕರಿಸಿದೆ.
ಪ್ರಚೋದನಾಕಾರಿ ಭಾಷಣ ಮಾಡಿ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವ ಕಾಗೋಡು ಶಿವಮೊಗ್ಗದ ಶೀಘ್ರ ವಿಲೇವಾರಿ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ನೀಡಲು ನಿರಾಕರಿಸಿದರು.
ಶಿವಮೊಗ್ಗ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಬಂಗಾರಪ್ಪ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಗೋಡು ಅವರು, ಹಿಂದುತ್ವದ ಬಗ್ಗೆ ಮಾತನಾಡುವವರ ಕೈ ಕತ್ತರಿಸಬೇಕು ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು, ಅಲ್ಲದೇ ಚುನಾವಣಾ ಆಯೋಗ ಕಾಗೋಡು ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಿತ್ತು. |