ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಿಎಂ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಿಎಂ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಜಾರಿಗೆ ತಂದ ಸಂಧ್ಯಾ ಸುರಕ್ಷಾ, ಭಾಗ್ಯಲಕ್ಷಿ, ಶಾಲಾ ಮಕ್ಕಳಿಗೆ ಸೈಕಲ್ ವಿತರಣೆಯಂತಹ ಜನಪರ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಸರ್ಕಾರದ ಕಾರ್ಯಕ್ರಮಗಳು ಎಂದು ಬಿಂಬಿಸಿ ಬೀದಿಯಲ್ಲಿ ಪ್ರಚಾರ ನಡೆಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ದೇಶವನ್ನು ಆಳಿದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ರಾಜ್ಯದ ಅಭಿವೃದ್ದಿಗೆ ನೀಡಿದ ಕೊಡುಗೆ ಏನು ಎಂದು ಪ್ರಶ್ನಿಸಿದರಲ್ಲದೆ, ರಾಜ್ಯದ ರೈತರ ಸಮಸ್ಯೆ, ನೀರಾವರಿ ಹಾಗೂ ಅತಿವೃಷ್ಟಿ, ಅನಾವೃಷ್ಟಿ ಉಂಟಾದಾಗ ರಾಜ್ಯಕ್ಕೆ ಅಗತ್ಯ ನೆರವು ನೀಡುವಲ್ಲಿ ಈ ಪಕ್ಷಗಳು ವಿಫಲವಾಗಿವೆ ಎಂದು ಟೀಕಿಸಿದರು.

ಮಾಧ್ಯಮಗಳಿಗೆ ಸಂದರ್ಶನ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜ್ಯದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿದ್ದೇನೆ ಎಂಬ ರೀತಿಯಲ್ಲಿ ಹೇಳಿಕೆ ನೀಡಿರುವ ಬಗ್ಗೆ ಕಟುವಾಗಿ ಟೀಕಿಸಿದರು. ರೈತರಿಗೆ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಹೇಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಯಿಸಿದ ಕುಮಾರಸ್ವಾಮಿ, ನಮ್ಮ ರೈತರಿಗೆ ನಿಮ್ಮ ರಕ್ತ ಬೇಡ ಸ್ವಾಮಿ, ರೈತರು ಬೆಳೆಯುವ ಬೆಳೆಗಳಿಗೆ ತಾವು ಸೂಕ್ತ ಬೆಂಬಲ ಬೆಲೆ ನೀಡಿ ಸಾಕು ಎಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪಕ್ಷೇತರರಿಗೆ ಭಯವಿಲ್ಲ: ನರೇಂದ್ರಸ್ವಾಮಿ
ಖರ್ಗೆ ರಾಜೀನಾಮೆ: ಸಿದ್ದು ಹಾದಿ ಸುಗಮ
ಸೂಕ್ತ ಸಮಯದಲ್ಲಿ ಬಿಜೆಪಿಗೆ ಸೂಕ್ತ ಉತ್ತರ: ಡಿಕೆಶಿ
ಕಾಂಗ್ರೆಸ್ ಸ್ಥಾನಮಾನ: ಮತ್ತೆ ಮುನಿಸಿಕೊಂಡ ಸಿದ್ದು
ಮಲಬಾರಿ ವಕೀಲರ ಹತ್ಯೆ: ರವಿ ಪೂಜಾರಿ ಕೃತ್ಯ?
ಡಿವಿಎಸ್, ಅಂಬಿ, ರಾಘವೇಂದ್ರ ನಾಮಪತ್ರ ಸಲ್ಲಿಕೆ