ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬಿಜೆಪಿಯಿಂದ ಸಮಾಜದಲ್ಲಿ ಅಶಾಂತಿ: ಜಿ. ಪರಮೇಶ್ವರ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಜೆಪಿಯಿಂದ ಸಮಾಜದಲ್ಲಿ ಅಶಾಂತಿ: ಜಿ. ಪರಮೇಶ್ವರ್
ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಜಾತಿ ಮತ್ತು ಧರ್ಮದ ನಡುವೆ ಕಂದಕ ಸೃಷ್ಟಿಸಿ ಸಮಾಜದ ಶಾಂತಿ ಮತ್ತು ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ನೂತನ ಅಧ್ಯಕ್ಷ ಹಾಗೂ ಮಾಜಿ ಸಚಿವ ಡಾ| ಜಿ. ಪರಮೇಶ್ವರ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಜಾತಿ ಮತ್ತು ಧರ್ಮಗಳ ನಡುವೆ ಕಂದಕ ಸೃಷ್ಟಿಸಿರುವುದರಿಂದ ಪರಸ್ಪರರಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗಿ ಸಮಾಜದಲ್ಲಿ ಘರ್ಷಣೆಗೆ ಕಾರಣವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕಳೆದ 10 ತಿಂಗಳಲ್ಲಿ ರಾಜ್ಯದಲ್ಲಿ ಏನೇನು ಮಾಡಿದೆ ಎಂಬುದನ್ನು ರಾಜ್ಯದ ಜನತೆಗೆ ಹೇಳಬೇಕು. ಧಾರ್ಮಿಕ ಸಂಸ್ಥೆಗಳಿಗೆ ಹಣ ಕೊಡುವುದು ನಮಗೆ ಅಪ್ರಸ್ತುತ. ಆದರೆ ಬಜೆಟ್‌ನಲ್ಲಿ ಘೋಷಿಸಿದ ಕಾರ್ಯಕ್ರಮಗಳಿಗೆ ಸಂಪೂರ್ಣ ಹಣ ಬಿಡುಗಡೆ ಮಾಡದೆ ಅಭಿವೃದ್ದಿ ಕೆಲಸಗಳು ಕುಂಠಿತಗೊಂಡಿದ್ದರೂ ಅಭಿವೃದ್ದಿ ಕೆಲಸಗಳು ಆಗಿವೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ದೇಶದ ಭವಿಷ್ಯದ ದೃಷ್ಟಿಯಿಂದ ಇದೊಂದು ನಿರ್ಣಾಯಕ ಚುನಾವಣೆ ಆಗಿದ್ದು, ಕಳೆದ 5 ವರ್ಷಗಳಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಮಾಡಿದ ಸಾಧನೆಯೇ ನಮಗೆ ಶ್ರೀರಕ್ಷೆ ಎಂದು ಅವರು ಪರಮೇಶ್ವರ್ ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಲೋಕಾಯುಕ್ತ ದುರುಪಯೋಗ ಯತ್ನ: ಹೆಗ್ಡೆ ಅಸಮಾಧಾನ
ಕತ್ತರಿಸುವವರು, ಚಚ್ಚುವವರನ್ನು ದೂರವಿಡಿ: ಸಾಹಿತಿಗಳು
ದೇಶವನ್ನಾಳಿದ ಕಾಂಗ್ರೆಸ್ ಭಸ್ಮಾಸುರ ಪಕ್ಷ: ಶೃತಿ
ಸಿಂಗ್ ದುರ್ಬಲ ಪ್ರಧಾನಿಯಲ್ಲ: ಎಸ್.ಎಂ. ಕೃಷ್ಣ ಸ್ಪಷ್ಟೋಕ್ತಿ
ಪ್ರಚಾರಕ್ಕೆ ಸಿಎಂ ಆಹ್ವಾನಿಸಿಲ್ಲ: ವರ್ತೂರು
ದಾವಣಗೆರೆ ಬಿಜೆಪಿ ಅಭ್ಯರ್ಥಿ ನಾಮಪತ್ರ ಅಂಗೀಕಾರ