ರಾಜ್ಯದ ವಿವಿಧೆಡೆ ಭಾನುವಾರ ಅಕಾಲಿಕವಾಗಿ ಗುಡುಗು, ಸಿಡಿಲು ಮಳೆಯಿಂದಾಗಿ ಏಳು ಮಂದಿ ಸಾವನ್ನಪ್ಪಿದ್ದು, ಲಕ್ಷಾಂತರ ರೂಪಾಯಿ ಆಸ್ತಿ-ಪಾಸ್ತಿ ಹಾನಿ ಸಂಭವಿಸಿದೆ.
ಬೆಂಗಳೂರಿನ ಯಲಹಂಕದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದು, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಗ್ರಾಮದಲ್ಲಿ ಒಬ್ಬ ರೈತ ಸಾವನ್ನಪ್ಪಿದ್ದಾರೆ.
ಭಾನುವಾರ ಮಧ್ನಾಹ್ನ ಭಾರೀ ಗಾಳಿ ಮಳೆ ಸುರಿದ ಪರಿಣಾಮ ದೊಡ್ಡ, ದೊಡ್ಡ ಮರಗಳು ನೆಲಕ್ಕೆ ಉರುಳಿ ಬಿದ್ದು, ವಾಹನ ಸಂಚಾರಕ್ಕೆ ಮತ್ತು ವಿದ್ಯುತ್ ಸರಬರಾಜು ಸಂಪೂರ್ಣ ಸ್ಥಗಿತಗೊಂಡು, ಜನಜೀವನ ಅಸ್ತವ್ಯಸ್ತಗೊಂಡಿತ್ತು.
ಘಟನಾ ಸ್ಥಳಕ್ಕೆ ತಹಸೀಲ್ದಾರ್ ಹಾಗೂ ಅಧಿಕಾರಿಗಳು ಭೇಟಿ ನೀಡಿ, ಆಸ್ತಿ-ಪಾಸ್ತಿ ನಷ್ಟದ ಬಗ್ಗೆ ಪರಿಶೀಲನೆ ನಡೆಸಿರುವುದಾಗಿ ತಿಳಿಸಿದ್ದಾರೆ. ತೀವ್ರ ಸೆಖೆಯಿಂದ ಬಳಲುತ್ತಿದ್ದ ನಗರದ ಜನರು ಆಕಸ್ಮಿಕ ಸುರಿದ ಮಳೆಯಿಂದಾಗಿ ತಂಪೆರೆಯಿತು. |