ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಮಸ್ಯೆ ಪರಿಹರಿಸದಿದ್ರೆ ರಾಜಕೀಯದಿಂದ ನಿರ್ಗಮನ: ಸಿಎಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಮಸ್ಯೆ ಪರಿಹರಿಸದಿದ್ರೆ ರಾಜಕೀಯದಿಂದ ನಿರ್ಗಮನ: ಸಿಎಂ
ರಾಜ್ಯವನ್ನು ಕಾಡುತ್ತಿರುವ ವಿದ್ಯುತ್ ಹಾಗೂ ಮೂಲಭೂತ ಸೌಕರ್ಯದ ಸಮಸ್ಯೆಯನ್ನು ಬಿಜೆಪಿ ಸರ್ಕಾರ ಐದು ವರ್ಷಗಳಲ್ಲಿ ಪರಿಹರಿಸಲಿದೆ. ಒಂದು ವೇಳೆ ಅದು ಸಾಧ್ಯವಾಗದಿದ್ದರೆ ರಾಜಕೀಯದಿಂದಲೇ ನಿರ್ಗಮಿಸುವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ವಿದ್ಯುತ್ ಸಮಸ್ಯೆಯನ್ನೇ ದೊಡ್ಡದು ಮಾಡಿ ಟೀಕಾಪ್ರಹಾರ ನಡೆಸುತ್ತಿರುವ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿರುವ ಅವರು, ಬಿಜೆಪಿ ಸರ್ಕಾರ ಐದು ವರ್ಷ ಪೂರ್ಣಗೊಳಿಸುವವರೆಗೆ ಮೌನವಾಗಿರುವಂತೆ ಪ್ರತಿಪಕ್ಷಗಳಿಗೆ ತಾಕೀತು ಮಾಡಿದರು.

ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ಬಹಿರಂಗ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬಿಜೆಪಿ ಮಠ-ಮಾನ್ಯಗಳಿಗೆ ಹಣ ಹಂಚುತ್ತಿದೆ. ವಿದ್ಯುತ್ ಸಮಸ್ಯೆ ಬಗೆಹರಿಸುತ್ತಿಲ್ಲ ಎಂದು ಆರೋಪಿಸುತ್ತಿದೆ ಎಂಬ ಟೀಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ನವರು ರಾಹುಲ್ ಗಾಂಧಿ ಮೂಲಕ ಕೇಂದ್ರದ ಅನುದಾನವನ್ನು ರಾಜ್ಯ ಸರ್ಕಾರ ಸಮರ್ಪಕವಾಗಿ ಬಳಸಿಲ್ಲ ಎಂದು ಹೇಳಿಸಿದ್ದಾರೆ. ಆದರೆ, ಈ ಬಗ್ಗೆ ಅಂಕಿ-ಅಂಶಗಳೊಂದಿಗೆ ನ್ಯಾಷನಲ್ ಕಾಲೇಜು ಮೈದಾನದಲ್ಲೇ ಬಹಿರಂಗ ಚರ್ಚೆಗೆ ನಾನು ಸಿದ್ದ ಎಂದು ಅವರು ಸವಾಲು ಹಾಕಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಅಧಿಕಾರ ನೀಡಿ: ಸಂವಿಧಾನ ತಿದ್ದುಪಡಿ-ಆಡ್ವಾಣಿ ಭರವಸೆ
ನಕ್ಸಲ್ ಪೀಡಿತ ಪ್ರದೇಶಗಳಿಗೆ ವಿಶೇಷ ಭದ್ರತೆ:ಅಜಯ್ ಕುಮಾರ್
ಶಾಸಕ ಎನ್.ಸಂಪಂಗಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ
ವಸೂಲಿ ಆರೋಪ-ಎಚ್‌ಡಿಕೆ ಕ್ಷಮೆಗೆ ಸಿಎಂ ಆಗ್ರಹ
ಅಂಬೇಡ್ಕರ್‌ಗೆ ಅವಹೇಳನ: ಶಾಸಕ ಮಸ್ಕಿ ಬಂಧನ
ಹಣ ದುರ್ಬಳಕೆ-ಸಿಬಿಐ ತನಿಖೆಗೆ ಕಾಂಗ್ರೆಸ್ ಒತ್ತಾಯ