ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಗಡಿ ಒತ್ತುವರಿ-ಜಂಟಿ ಸಮೀಕ್ಷೆಗೆ ಹೈಕೋರ್ಟ್ ಆದೇಶ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಗಡಿ ಒತ್ತುವರಿ-ಜಂಟಿ ಸಮೀಕ್ಷೆಗೆ ಹೈಕೋರ್ಟ್ ಆದೇಶ
NRB
ಕರ್ನಾಟಕ ಮತ್ತು ಆಂಧ್ರಪ್ರದೇಶ ನಡುವೆ ಗಡಿ ವಿವಾದಕ್ಕೆ ಕಾರಣವಾಗಿದ್ದ ಓಬಳಾಪುರಂ ಗಣಿಗಾರಿಕೆ ಪ್ರದೇಶದ ಬಗ್ಗೆ ಜಂಟಿ ಸಮೀಕ್ಷೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.

ಬಳ್ಳಾರಿ ಗಣಿ ಕುಳ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ ಆಂಧ್ರಪ್ರದೇಶದಿಂದ ಗಣಿಗಾರಿಕೆಗೆ ಪರವಾನಿಗೆ ಪಡೆದು ಕರ್ನಾಟಕದ ಗಡಿಯನ್ನು ಒತ್ತುವರಿ ಮಾಡಿಕೊಂಡು ತಮಗೆ ಸೇರಿದ ಪ್ರದೇಶದಲ್ಲಿ ಗಣಿಗಾರಿಕೆ ನಡೆಸುತ್ತಿದೆ ಎಂದು ಆರೋಪಿಸಿ ಬಳ್ಳಾರಿಯ ನಾರಾಯಣರೆಡ್ಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಡಿ.ದಿನಕರನ್ ಮತ್ತು ನ್ಯಾ.ವಿ.ಜಿ.ಸಭಾಹಿತ್ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ.

ಕೇಂದ್ರ ಸರ್ಕಾರದ ಇಂಡಿಯನ್ ಬ್ಯುರೋ ಆಫ್ ಮೈನ್ಸ್ ಮತ್ತು ಸರ್ವೇ ಆಫ್ ಇಂಡಿಯಾದ ನಿರ್ದೇಶಕರಿಂದ ಜಂಟಿ ಸಮೀಕ್ಷೆ ನಡೆಸಬೇಕು. ಈ ಬಗ್ಗೆ ಇಂಡಿಯನ್ ಬ್ಯುರೋ ಆಫ್ ಮೈನ್ಸ್‌ನ ಕರ್ನಾಟಕ ಮತ್ತು ಆಂಧ್ರಪ್ರದೇಶ ವಿಭಾಗಗಳಿಗೆ ಮಾಹಿತಿ ನೀಡಬೇಕು. ತುಮಟಿ ಐರನ್ ಓರ್ ಕಂಪೆನಿ ಮಾಲೀಕ ನಾರಾಯಣ ರೆಡ್ಡಿ ಮತ್ತು ಓಬಳಾಪುರಂ ಮೈನಿಂಗ್ ಕಂಪೆನಿಯ ಮುಖ್ಯಸ್ಥರ ನೇತೃತ್ವದಲ್ಲಿ ಈ ಜಂಟಿ ಸಮೀಕ್ಷೆ ನಡೆಸಬೇಕು ಎಂದು ಪೀಠ ತಿಳಿಸಿದೆ.

ಜೂನ್ 8ರೊಳಗೆ ಸಮೀಕ್ಷಾ ವರದಿ ಹೈಕೋರ್ಟ್‌ಗೆ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅಲ್ಲದೇ ಸಂಡೂರು ತಾಲೂಕಿನ ತುಮಟಿಯ ವಿವಾದವಿಲ್ಲದ ಸರ್ವೇ ನಂ.1ರ 11ಹೆಕ್ಟೇರ್ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಿ ಅದಿರನ್ನು ಸಾಗಣೆ ಮಾಡಲು ನಾರಾಯಣ ರೆಡ್ಡಿಗೆ ಅವಕಾಶ ನೀಡಬೇಕೆಂದು ಪೀಠ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಯಡಿಯೂರಪ್ಪ ಅತ್ಯಂತ ದುರ್ಬಲ ಸಿಎಂ: ವೀರಪ್ಪ ಮೊಯ್ಲಿ
ಮಂಗಳೂರು: ಮತದಾನ ಬಹಿಷ್ಕರಿಸಲು ನಕ್ಸಲ್ ಕರೆ
ಪ್ರಥಮ ಹಂತ: 17 ಕ್ಷೇತ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ರೆಡ್ಡಿ ಬಳಿ ಅಪಾರ ಕಪ್ಪು ಹಣವಿದೆ: ಕುಮಾರಸ್ವಾಮಿ
ತೃತೀಯ ರಂಗಕ್ಕೆ ಜನರ ಬೆಂಬಲವಿದೆ: ದೇವೇಗೌಡ
ಭೀಕರ ಅಪಘಾತ: ಸುರತ್ಕಲ್‌‌ನ 6ಮಂದಿ ದಾರುಣ ಸಾವು