ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಜ್ಯದ ಆಡಳಿತಕ್ಕೆ ಮೇಜರ್ ಸರ್ಜರಿ: ಯಡಿಯೂರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ಯದ ಆಡಳಿತಕ್ಕೆ ಮೇಜರ್ ಸರ್ಜರಿ: ಯಡಿಯೂರಪ್ಪ
ಆಡಳಿತರೂಢ ಬಿಜೆಪಿ ರಾಜ್ಯದಲ್ಲಿ ಆಪರೇಷನ್ ಕಮಲದ ಮೂಲಕ ವಿವಾದಕ್ಕೆ ಒಳಗಾಗಿದ್ದು, ಈಗ ಲೋಕಸಭೆ ಚುನಾವಣೆ ಮುಗಿದ ನಂತರ ರಾಜ್ಯದ ಆಡಳಿತದಲ್ಲಿ ಮೇಜರ್ ಸರ್ಜರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಚುನಾವಣಾ ಪ್ರಚಾರಕ್ಕಾಗಿ ಹಾವೇರಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಸರ್ಕಾರವನ್ನು ಜನತೆ ಒಪ್ಪಿಕೊಂಡಿದೆ ಮತ್ತು ಅವರ ಪ್ರೀತಿ ಮತ್ತಷ್ಟು ಹೆಚ್ಚಾಗುತ್ತಿದೆ ಎಂದರು. ರಾಜ್ಯದೆಲ್ಲೆಡೆ ಬಿಜೆಪಿಗೆ ಅಭೂತಪೂರ್ವ ಬೆಂಬಲ ದೊರೆತಿದೆ. ತಮ್ಮ ಸರ್ಕಾರದ ಪ್ರಾಮಾಣಿಕತೆಯನ್ನು ಮೆಚ್ಚಿ ಜನ ಅಪಾರ ಸಂಖ್ಯೆಯಲ್ಲಿ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಭಾರಿ ಬಹುಮತದಲ್ಲಿ ಗೆಲ್ಲುತ್ತದೆ. ಬೇರೆ ಪಕ್ಷಗಳು ಅಂದುಕೊಂಡಿರುವುದು ಹುಸಿಯಾಗಲಿದೆ, ತಾವು ವಿರೋಧ ಪಕ್ಷಗಳ ಮಾತಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.

ಹಾಗೆ ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿರುವ ಡಿ.ಬಿ. ಚಂದ್ರೇಗೌಡ ಬಾರಿ ಬಹುಮತದಿಂದ ಗೆಲ್ಲುತ್ತಾರೆ ಎಂಬ ಇಂಗಿತವನ್ನು ಅವರು ವ್ಯಕ್ತಪಡಿಸಿದ್ದಾರೆ.

ಹಾವೇರಿಯಲ್ಲಿ ನಡೆದ ಗೋಲಿಬಾರ್ ಘಟನೆ ಎಂದೂ ಮರೆಯಲು ಸಾಧ್ಯವಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ ಅವರು, ವಿರೋಧ ಪಕ್ಷಗಳು ಹದ್ದುಮೀರಿ ಮಾತನಾಡಿ ತಮ್ಮ ಪಕ್ಷದ ಮೌಲ್ಯವನ್ನು ಕಳೆದುಕೊಳ್ಳುತ್ತಿವೆ ಎಂದು ಕಿಡಿಕಾರಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮಾರಾಮಾರಿ: ಬಂಗಾರಪ್ಪ ಮೇಲೆ ಕಲ್ಲೆಸೆತ
ಮೀಸಲಾತಿಗೆ ಯಡಿಯೂರಪ್ಪ ಅಡ್ಡಗಾಲು: ಸಿದ್ದರಾಮಯ್ಯ
ರೈತರನ್ನು ಕೊಲ್ಲುವ ಕಟುಕ ನಾನಲ್ಲ: ಯಡಿಯೂರಪ್ಪ
ರಾಜ್ಯದ 17 ಕ್ಷೇತ್ರಗಳಲ್ಲಿ ಬಿರುಸಿನ ಮತದಾನ
ಎಸ್ಎಂಎಸ್‌ ಮೂಲಕ ತಮ್ಮ ಮತಗಟ್ಟೆ ವಿವರ
ಸಾಯೋಮುನ್ನ ಬಡವರ ಕಣ್ಣೀರೊರೆಸಬೇಕು: ಗೌಡ