ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಓಬಳಾಪುರಂ ಗಣಿಗಾರಿಕೆಯ ರದ್ದತಿ ಇಲ್ಲ: ಜನಾರ್ದನ ರೆಡ್ಡಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಓಬಳಾಪುರಂ ಗಣಿಗಾರಿಕೆಯ ರದ್ದತಿ ಇಲ್ಲ: ಜನಾರ್ದನ ರೆಡ್ಡಿ
NRB
ತೀವ್ರ ವಿವಾದಕ್ಕೆ ಕಾರಣವಾಗಿರುವ ಓಬಳಾಪುರಂ ಗಣಿಗಾರಿಕೆಯ ರದ್ದತಿಗೆ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ನೀಡಿದ ಬೆನ್ನಲ್ಲೆ ಗಣಿಗಾರಿಕೆಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಸಂಸ್ಥೆ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿಲ್ಲ. ಕಾನೂನು ಉಲ್ಲಂಘಿಸುವಂತ ಯಾವುದೇ ಕಾರ್ಯವನ್ನು ತಾವು ಮಾಡಿಲ್ಲವಾದ್ದರಿಂದ ಚಟುವಟಿಕೆ ಸ್ಥಗಿತಗೊಳಿಸುವ ಪ್ರಶ್ನೆಯೇ ಉದ್ಭವಿಸದು ಎಂದು ತಿಳಿಸಿದ್ದಾರೆ.

ಈ ಬಗ್ಗೆ ಕೇಂದ್ರ ಸರ್ಕಾರ ತಮ್ಮ ಮಾಲೀಕತ್ವದ ಓಎಂಸಿ ಸೇರಿದಂತೆ ಐದು ಗಣಿಗಾರಿಕೆ ಸಂಸ್ಥೆಯನ್ನು ಸ್ಥಗಿತಗೊಳಿಸಲು ಸೂಚನೆ ನೀಡಿರುವ ಪತ್ರ ತಮಗೆ ತಲುಪಿಲ್ಲ ಎಂದು ತಿಳಿಸಿದ್ದಾರೆ.

ಏಪ್ರಿಲ್ 22ರಂದು ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಬರೆದ ಪತ್ರಕ್ಕೆ ಉತ್ತರವಾಗಿ ಏಪ್ರಿಲ್ 25ರಂದು ಆಂಧ್ರ ವಾಣಿಜ್ಯ, ಕೈಗಾರಿಕೆ ಇಲಾಖೆ ಲಿಖಿತವಾಗಿ ಪ್ರತಿಕ್ರಿಯಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಮಧ್ಯೆ ರೆಡ್ಡಿ ಸಹೋದರರಾದ ಜನಾರ್ದನ ರೆಡ್ಡಿ, ಕರುಣಾಕರರೆಡ್ಡಿ ಮತ್ತು ಶ್ರೀರಾಮುಲು ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಪಟ್ಟು ಹಿಡಿದಿದ್ದು, ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಚುನಾವಣೆ ನಂತರ ಬಿಜೆಪಿ ನಾಶ: ವೀರಪ್ಪ ಮೊಯ್ಲಿ
ಯುಪಿಎನಿಂದ ಮಾತ್ರ ಸ್ಥಿರ ಸರ್ಕಾರ: ಸೋನಿಯಾ
'ನನ್ನದು ಇಂಟರ್‌ನ್ಯಾಶನಲ್ ಲೆವಲ್': ಬಂಗಾರಪ್ಪ
'ರೆಡ್ಡಿ ಬ್ರದರ್ಸ್' ಗಣಿಗಾರಿಕೆ ಸ್ಥಗಿತಕ್ಕೆ ಕೇಂದ್ರದ ಆದೇಶ
2ನೇ ಹಂತದ ಚುನಾವಣೆ-ರಾಜ್ಯಾದ್ಯಂತ ಅಬ್ಬರದ ಪ್ರಚಾರ
ಬೆಂಗಳೂರು: ಸಂಸದೆ ತೇಜಸ್ವಿನಿ ಹಣ ದರೋಡೆ