ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಚಪ್ಪಲಿ ಎಸೆದಾತ ಜೆಡಿಎಸ್ ಕಾರ್ಯಕರ್ತನಲ್ಲ: ದೇವೇಗೌಡ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚಪ್ಪಲಿ ಎಸೆದಾತ ಜೆಡಿಎಸ್ ಕಾರ್ಯಕರ್ತನಲ್ಲ: ದೇವೇಗೌಡ
ಚನ್ನರಾಯಪಟ್ಟಣದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಚಪ್ಪಲಿ ಎಸೆದ ಆರೋಪಿ ಚಂದ್ರಶೇಖರ್ ಜೆಡಿಎಸ್ ಪಕ್ಷದ ಕಾರ್ಯಕರ್ತನಲ್ಲ. ಇದೆಲ್ಲ ಅಪಪ್ರಚಾರದ ಹುನ್ನಾರ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆಕ್ರೋಶವ್ಯಕ್ತಪಡಿಸಿದ್ದಾರೆ.

ಯಾರೋ ಮಾಡಿದ ತಪ್ಪಿಗೆ ನಮ್ಮ ಪಕ್ಷದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದರು. ಪಡುವಲಹಿಪ್ಪೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪ್ರೌಢಶಾಲೆಯಲ್ಲಿನ ಮತಗಟ್ಟೆಯಲ್ಲಿ ಪತ್ನಿ ಚನ್ನಮ್ಮರೊಂದಿಗೆ ಮತಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಚಪ್ಪಲಿ ಎಸೆದ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಿತಿಮೀರಿ ಮಾತನಾಡುತ್ತಿದ್ದಾರೆ. ಅವರು ಮನಸ್ಸಿಗೆ ಬಂದಂತೆ ಮಾತನಾಡುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಇತ್ತೀಚೆಗೆ ಹಾಸನದ ಚನ್ನರಾಯಪಟ್ಟಣದಲ್ಲಿ ಬಿಜೆಪಿ ಸಮಾವೇಶ ನಡೆಯುತ್ತಿದ್ದ ವೇಳೆ ಜೆಡಿಎಸ್ ಕಾರ್ಯಕರ್ತ ಎನ್ನಲಾದ ಚಂದ್ರಶೇಖರ್ ಎಂಬಾತ ಮುಖ್ಯ.ಮಂತ್ರಿ ಯಡಿಯೂರಪ್ಪ ಮೇಲೆ ಚಪ್ಪಲಿ ಎಸೆಯಲು ಪ್ರಯತ್ನಿಸಿದ್ದ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿತ್ತು. ಆದರೆ ಈ ಘಟನೆಯ ಹಿಂದೆ ದೇವೇಗೌಡರ ಕುಮ್ಮಕ್ಕಿದೆ ಎಂದು ಯಡಿಯೂರಪ್ಪ ಆರೋಪಿಸಿದ್ದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರಾಘವೇಂದ್ರ ಸೋತರೆ ಸಿಎಂ ಸೋತಂತೆ: ಬಂಗಾರಪ್ಪ
ಬೆಂಗಳೂರು: ಹವಾಲ ಜಾಲ-ಇಬ್ಬರ ಬಂಧನ
ಬಿಜೆಪಿಗೆ ಮತ ನೀಡಲು 'ಆಯುಷ್' ಫರ್ಮಾನು!
ಯಡಿಯೂರಪ್ಪ ಬಾಯಿ ಬಿಗಿ ಹಿಡಿದು ಮಾತಾಡಲಿ: ದೇವೇಗೌಡ
ಮಹಾತ್ಮಗಾಂಧಿ-ಬೋಸ್‌ಗೂ ನೀತಿ ಸಂಹಿತೆ ಬಿಸಿ!
ಖೋಟಾ ನೋಟು ಜಾಲ-ನಾಲ್ವರ ಬಂಧನ