ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದೆ. ಶುಕ್ರವಾರ ಮಧ್ಯಾಹ್ನದ ನಂತರ ನಿಮ್ಮ ವೆಬ್ದುನಿಯಾ ಕನ್ನಡದಲ್ಲಿ ಹಾಗೂ ಇಲಾಖೆಯ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ . ಮೇ 2ರಂದು ಸಂಬಂಧಿಸಿದ ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಈ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 8.58 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಮೌಲ್ಯಮಾಪನ ಕಾರ್ಯ ಏ.19ಕ್ಕೆ ಅಂತ್ಯವಾಗಿತ್ತು. ಮೇ 1ರಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಫಲಿತಾಂಶದ ವಿವರಗಳನ್ನು ನೀಡಲಿದ್ದಾರೆ. ಮಧ್ಯಾಹ್ನ ನಂತರ ಎಸ್ಸೆಸ್ಸೆಲ್ಸಿ ಫಲಿತಾಂಶವು ವೆಬ್ದುನಿಯಾದಲ್ಲಿ ಲಭ್ಯವಾಗಲಿದೆ.ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ. |