ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ದೂರು ವಾಪಸ್ ಪಡೆಯಲು ಶಾಸಕ ರಾಜು ಧರಣಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ದೂರು ವಾಪಸ್ ಪಡೆಯಲು ಶಾಸಕ ರಾಜು ಧರಣಿ
ಕಾಂಗ್ರೆಸ್ ಕಾರ್ಯಕರ್ತನ ಮೇಲೆ ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ದೂರನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಾಸಕ ರಾಜು ಕಾಗೆ ಶನಿವಾರ ಅಥಣಿಯಲ್ಲಿ ಧರಣಿ ನಡೆಸುತ್ತಿದ್ದಾರೆ.

ತನ್ನ ವಿರುದ್ಧ ಠಾಣೆಯಲ್ಲಿ ದಾಖಲಾಗಿರುವ ದೂರನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಶಾಸಕ ಕಾಗೆ ಧರಣಿ ನಡೆಸುತ್ತಿದ್ದು, ಇದಕ್ಕೆ ಬೆಂಬಲವಾಗಿ ಸಚಿವರಾದ ಲಕ್ಷ್ಮಣ ಸವದಿ ಹಾಗೂ ಉಮೇಶ್ ಕತ್ತಿ ಕೂಡ ಸಾಥ್ ನೀಡಿದ್ದಾರೆ.

ವೈಯಕ್ತಿಕ ಭಿನ್ನಾಭಿಪ್ರಾಯದಿಂದ ಅಸಮಾಧಾನಗೊಂಡ ಬಿಜೆಪಿ ಶಾಸಕ ಭರಮಗೌಡ ರಾಜು ಕಾಗೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಗವಾಡ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿತ್ತು.

ಅಥಣಿ ತಾಲೂಕಿನ ಮಂಗಸೂರು ಎಂಬಲ್ಲಿ ವೈಯಕ್ತಿಕ ದ್ವೇಷದಿಂದಾಗಿ ತಾಳ್ಮೆ ಕಳೆದುಕೊಂಡ ಶಾಸಕ ರಾಜು ಕಾಗೆ ಅವರು ಕಾಂಗ್ರೆಸ್ ಕಾರ್ಯಕರ್ತ ಮೋಹನ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಶಾಸಕ ಕಾಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಬಂಧಿಸುವಂತೆ ಆಗ್ರಹಿಸಿ ಠಾಣೆಗೆ ಮುತ್ತಿಗೆ ಹಾಕಿದ ಪ್ರಸಂಗವೂ ನಡೆದಿತ್ತು.

ಗ್ರಾಮಸ್ಥರ ಒತ್ತಾಯಕ್ಕೆ ಮಣಿದ ಕಾಗವಾಡ ಪೊಲೀಸರು ಕೊನೆಗೂ ಶಾಸಕ ರಾಜು ಕಾಗೆ ವಿರುದ್ಧ ಕೊಲೆಯತ್ನ ಮೊಕದ್ದಮೆಯನ್ನು ದಾಖಲಿಸಿಕೊಂಡಿದ್ದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಗಣಿ: ಗಡಿ ಸಮೀಕ್ಷೆಗೆ 'ಸುಪ್ರೀಂ' ಆರು ವಾರ ಗಡುವು
'ಹೇಳಿದಷ್ಟು ಬರೆದುಕೊಳ್ಳಿ': ಪತ್ರಕರ್ತರಿಗೆ ಶಾಸಕರ ತಾಕೀತು!
ಕೊಂಡಜ್ಜಿ ಸಾವು-ರಾಜಕೀಯ ಬಣ್ಣ ಬೇಡ: ರೆಡ್ಡಿ
ಧರ್ಮಸ್ಥಳ ಗಲಭೆ-ಬೆಳ್ತಂಗಡಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
ರಾಜ್ಯದಲ್ಲಿ ಕಾಂಗ್ರೆಸ್‌ಗೆ 20 ಸ್ಥಾನ ಖಚಿತ: ಶಿವಕುಮಾರ್
ಜೆಡಿಎಸ್ ಮುಖಂಡ ಕೊಂಡಜ್ಜಿ ಕೊಲೆ ಆರೋಪಿ ಸೆರೆ