ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಚುನಾವಣೆ ಬಳಿಕ ವೈದ್ಯರ ಬೇಡಿಕೆ ಈಡೇರಿಕೆ: ಸಿಎಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚುನಾವಣೆ ಬಳಿಕ ವೈದ್ಯರ ಬೇಡಿಕೆ ಈಡೇರಿಕೆ: ಸಿಎಂ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಿರಿಯ ವೈದ್ಯರು ನಡೆಸುತ್ತಿರುವ ಮುಷ್ಕರವನ್ನು ಹೈಕೋರ್ಟ್ ಛೀಮಾರಿಯ ನಂತರ ಕೈಬಿಟ್ಟ ಹಿನ್ನೆಲೆಯಲ್ಲಿ, ಬೇಡಿಕೆಗಳನ್ನು ಮುಂದಿನ ತಿಂಗಳು ಈಡೇರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕಿರಿಯ ವೈದ್ಯರ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಾಗಿಲ್ಲ. ಹಾಗಾಗಿ ವೈದ್ಯರು ತಮ್ಮ ಮುಷ್ಕರವನ್ನು ಕೈ ಬಿಟ್ಟು ಕೆಲಸವನ್ನು ಮುಂದುವರಿಸಬೇಕು ಎಂದು ಯಡಿಯೂರಪ್ಪ ಮನವಿ ಮಾಡಿಕೊಂಡರು.

ನಾಲ್ಕನೇ ಹಾಗೂ ಅಂತಿಮ ಹಂತದ ಲೋಕಸಭೆ ಚುನಾವಣೆ ಮುಗಿದ ಬಳಿಕ ವೈದ್ಯರ ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಿರಿಯ ವೈದ್ಯರು ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಮುಷ್ಕರಕ್ಕೆ ಸೋಮವಾರ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಪಿ.ಡಿ.ದಿನಕರನ್ ಅಸಮಾಧಾನ ವ್ಯಕ್ತಪಡಿಸಿ, ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಮೆಡಿಕಲ್ ಕೌನ್ಸಿಲ್ ‌ಆಫ್ ಇಂಡಿಯಾಗೆ ನಿರ್ದೇಶನ ನೀಡಿದ ಪರಿಣಾಮ ಮುಷ್ಕರ ಅಂತ್ಯಗೊಳಿಸಿ ಕರ್ತವ್ಯಕ್ಕೆ ಹಾಜರಾಗಿದ್ದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬೆಂಗಳೂರು: ಕೊಲೆ ಆರೋಪಿಗಳ ಬಂಧನ
ಸಂಗಮೇಶ್ ಹೇಳಿಕೆ 'ಹಸಿ ಸುಳ್ಳು': ಬಂಗಾರಪ್ಪ
ಹಂದಿ ಜ್ವರ ಸೋಂಕು ತಡೆಗೆ ಕ್ರಮ: ಅಶೋಕ್
ಕಿರಿಯ ವೈದ್ಯರ ಮುಷ್ಕರಕ್ಕೆ ಹೈಕೋರ್ಟ್ ತಪರಾಕಿ
ಜೆಡಿಎಸ್ ಮುಖಂಡನ ಕೊಲೆ: ಅಧಿಕಾರಿಗಳಿಬ್ಬರ ಅಮಾನತು
ದೇವಸ್ಥಾನ ತೆರವು: ಬಜರಂಗದಳ ಪ್ರತಿಭಟನೆ