ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಯಡಿಯೂರಪ್ಪ ಬಹಿರಂಗ ಚರ್ಚೆಗೆ ಬರಲಿ: ಎಚ್‌ಡಿಕೆ ಸವಾಲು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಯಡಿಯೂರಪ್ಪ ಬಹಿರಂಗ ಚರ್ಚೆಗೆ ಬರಲಿ: ಎಚ್‌ಡಿಕೆ ಸವಾಲು
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 10 ತಿಂಗಳ ಅವಧಿಯಲ್ಲಿ ಜನರಿಗೆ ಕೊಟ್ಟ ಮಾತನ್ನು ಎಷ್ಟರ ಮಟ್ಟಿಗೆ ಉಳಿಸಿಕೊಂಡಿದ್ದಾರೆ ಎಂಬುದರ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಹಿರಂಗ ಚರ್ಚೆಗೆ ಬರಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಹಸಿರು ಶಾಲು ಹೊದ್ದು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಅವರು ರೈತರ ಸಮಸ್ಯಗೆ ಎಷ್ಟರ ಮಟ್ಟಿಗೆ ಸ್ಪಂದಿಸುತ್ತಿದ್ದಾರೆ ಎಂಬುದನ್ನು ರಾಜ್ಯದ ಜನತೆ ಮುಂದೆ ಬಹಿರಂಗವಾಗಿ ಸ್ಪಷ್ಟಪಡಿಸಲಿ ಎಂದು ಕುಮಾರಸ್ವಾಮಿ ಸವಾಲೆಸಗಿದ್ದಾರೆ.

ಅವರಿಗೆ ತಾಕತ್ತಿದ್ದರೆ 20 ತಿಂಗಳ ಅಧಿಕಾರ ಅವಧಿಯಲ್ಲಿ ಕೈಗೊಂಡ ಅಭಿವೃದ್ದಿ ಕಾರ್ಯಗಳು ಹಾಗೂ 10 ತಿಂಗಳಲ್ಲಿ ಯಡಿಯೂರಪ್ಪ ಮಾಡಿರುವ ಸಾಧನೆಗಳ ಬಗ್ಗೆ ಪರಿಶೀಲನೆ ಮಾಡಲಿ. ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸದ ಬಿಜೆಪಿ ಸರ್ಕಾರ ಹಣ ದೋಚುವಲ್ಲಿ ಮಗ್ನವಾಗಿದೆ ಎಂದು ದೂರಿದರು.

ಪ್ರಕೃತಿ ವಿಕೋಪದಿಂದಾಗಿ ರಾಜ್ಯದೆಲ್ಲೆಡೆ ಆಲಿಕಲ್ಲು ಮಳೆಯಿಂದಾಗಿ ಸಂಭವಿಸಿದ ಬೆಳೆ ಹಾನಿಯಿಂದ ರೈತರು ಲಕ್ಷಾಂತರ ರೂ. ನಷ್ಟ ಅನುಭವಿಸುತ್ತಿರುವಾಗ ಸಂಬಂಧಪಟ್ಟ ಸಚಿವರು ಎಲ್ಲಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಚುನಾವಣೆ ಬಳಿಕ ವೈದ್ಯರ ಬೇಡಿಕೆ ಈಡೇರಿಕೆ: ಸಿಎಂ
ಬೆಂಗಳೂರು: ಕೊಲೆ ಆರೋಪಿಗಳ ಬಂಧನ
ಸಂಗಮೇಶ್ ಹೇಳಿಕೆ 'ಹಸಿ ಸುಳ್ಳು': ಬಂಗಾರಪ್ಪ
ಹಂದಿ ಜ್ವರ ಸೋಂಕು ತಡೆಗೆ ಕ್ರಮ: ಅಶೋಕ್
ಕಿರಿಯ ವೈದ್ಯರ ಮುಷ್ಕರಕ್ಕೆ ಹೈಕೋರ್ಟ್ ತಪರಾಕಿ
ಜೆಡಿಎಸ್ ಮುಖಂಡನ ಕೊಲೆ: ಅಧಿಕಾರಿಗಳಿಬ್ಬರ ಅಮಾನತು