ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ: ಸಿಎಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ: ಸಿಎಂ
ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಕೇಂದ್ರದಿಂದ ಬರುವ ಅನುದಾನವನ್ನು ಸದುಪಯೋಗಪಡಿಸಿಕೊಳ್ಳದೆ ಸಬೂಬು ಹೇಳಿದರೆ ಸಹಿಸಲಾಗದು ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸಸೌಧ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯವನ್ನು ತರಾಟೆಗೆ ತೆಗೆದುಕೊಂಡರು.

ಸಭೆಯಲ್ಲಿ ಉದ್ಯೋಗ ಖಾತರಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕೆಲವು ಅಧಿಕಾರಿಗಳು ಈ ಯೋಜನೆ ಜಾರಿಯ ಜವಾಬ್ದಾರಿ ತಮ್ಮ ಇಲಾಖೆಯ ವ್ಯಾಪ್ತಿಗೆ ಒಳಪಡದು ಎಂದು ಹೇಳಿ ಬೇರೆ ಇಲಾಖೆಯತ್ತ ಬೊಟ್ಟು ಮಾಡಿ ತೋರಿಸಿದರು. ಇದರಿಂದ ಕುಪಿತಗೊಂಡ ಮುಖ್ಯಮಂತ್ರಿ, ಸಬೂಬು ಹೇಳುವುದನ್ನು ನಿಲ್ಲಿಸಿ ಕೇಂದ್ರದಿಂದ ಬರುವ ಹಣವನ್ನು ಸದುಪಯೋಗಪಡಿಸಿಕೊಳ್ಳಲು ಮುಂದಾಗುವಂತೆ ಸೂಚಿಸಿದರು.

ಕೇಂದ್ರದಿಂದ ಬರುವ ಹಣ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗುತ್ತಿಲ್ಲ ಎಂಬ ಮಾಧ್ಯಮಗಳ ವರದಿಗಳನ್ನಾದರೂ ಗಮನಿಸಿ ಎಚ್ಚೆತ್ತುಕೊಂಡು ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ನಟಿ ಶ್ರುತಿ-ಮಹೇಂದರ್ ದಾಂಪತ್ಯದಲ್ಲಿ 'ವಿರಸ'
ಮುಷ್ಕರಕ್ಕೆ ಕಾರಣ ಕೊಡಿ: ವೈದ್ಯರಿಗೆ ನೋಟಿಸ್
ಕ್ಯಾತಮಾರನಹಳ್ಳಿ ಗಲಭೆ: ಬಂಧಿತರ ಬಿಡುಗಡೆಗೆ ಕೆಎಫ್‌ಡಿ ಪ್ರತಿಭಟನೆ
ಅಂಬೇಡ್ಕರ್‌ಗೆ ಅವಹೇಳನ: ಗಂಗಾವತಿ ಬಂದ್
ಕಾಂಗ್ರೆಸ್-ಜೆಡಿಎಸ್ ಒಳಒಪ್ಪಂದ ವಿವರ ನೀಡಿ: ಬಿಜೆಪಿ
ಮೇ 9: ವೆಬ್‌ದುನಿಯಾದಲ್ಲಿ ಪಿಯುಸಿ ಫಲಿತಾಂಶ