ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಂಪುಟದಲ್ಲಿ ಯಾವುದೇ ಬದಲಾವಣೆ ಇಲ್ಲ: ಯಡಿಯೂರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಂಪುಟದಲ್ಲಿ ಯಾವುದೇ ಬದಲಾವಣೆ ಇಲ್ಲ: ಯಡಿಯೂರಪ್ಪ
ರಾಜ್ಯ ಸಚಿವ ಸಂಪುಟದಲ್ಲಿ ಯಾವುದೇ ಬದಲಾವಣೆ ಮಾಡುವ ಯೋಚನೆ ಸದ್ಯಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದು, ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಸಚಿವ ಸಂಪುಟ ಪುನಾರಚಿಸುವ ವದಂತಿಯನ್ನು ಮುಖ್ಯಮಂತ್ರಿ ತಳ್ಳಿಹಾಕಿದ್ದಾರೆ.

ತಮ್ಮ ಸರ್ಕಾರ ರಚನೆ ಮಾಡುವುದಕ್ಕಾಗಿ ಬೆಂಬಲ ನೀಡಿರುವ ಪಕ್ಷೇತರರನ್ನು ಯಾವುದೇ ಕಾರಣಕ್ಕೂ ಕೈ ಬಿಡುವುದಿಲ್ಲ, ಕೈ ಬಿಡುವ ಉದ್ದೇಶವೂ ನನಗಿಲ್ಲ ಎಂದರು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನದಲ್ಲಿ ಗೆಲ್ಲುತ್ತದೆ ಎಂಬ ವಿಶ್ವಾಸ ನನಗಿದೆ. ಸಚಿವರೆಲ್ಲರು ಚೆನ್ನಾಗಿಯೇ ಕೆಲಸ ಮಾಡಿದ್ದಾರೆ ಅವರ ಬಗ್ಗೆ ನನಗೆ ನಂಬಿಕೆ ಇದೆ ಎಂದು ಹೇಳಿದರು.

ಈ ಮೊದಲು ಲೋಕಸಭಾ ಚುನಾವಣೆ ಫಲಿತಾಂಶ ನಂತರ ಚುನಾವಣೆಯಲ್ಲಿ ಸರಿಯಾಗಿ ಕೆಲಸ ಮಾಡದವರನ್ನು ಸಂಪುಟದಿಂದ ಕೈ ಬಿಡುವುದಾಗಿ ಮುಖ್ಯಮಂತ್ರಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸಿಎಂ ದಿವಾಳಿ ಸರ್ಕಾರದ ಸುಳ್ಳಿನ ಸರದಾರ: ಜೆಡಿಎಸ್
ಜಗ್ಗೇಶ್ ವಿರುದ್ಧ ಅಂಬಿ ಅಭಿಮಾನಿಗಳ ಪ್ರತಿಭಟನೆ
ಹೈಕೋರ್ಟ್ ನಿರ್ದೇಶನದಂತೆ ಬಿಬಿಎಂಪಿ ಚುನಾವಣೆ: ಸಿಎಂ
ಮಂಗಳೂರು, ಗುಲ್ಬರ್ಗಾದಲ್ಲೂ ಕೌನ್ಸೆಲಿಂಗ್: ಲಿಂಬಾವಳಿ
ಲಾರಿ-ಬೈಕ್ ಡಿಕ್ಕಿ: ಪಿಯುಸಿ ವಿದ್ಯಾರ್ಥಿನಿ ಬಲಿ
ಗೋಲಿಬಾರ್ ಪ್ರಕರಣ: ಎಚ್.ಕೆ.ಪಾಟೀಲ್‌ಗೆ ಸಮನ್ಸ್ ಜಾರಿ